ಪ್ರಧಾನಿ ನರೇಂದ್ರ ಮೋದಿ 'ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿ
ಪ್ರಧಾನಿ ನರೇಂದ್ರ ಮೋದಿ ''ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಎಂದು ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿ ಮಾಡಿದ್ದಾರೆ.

ನವೆದಹಲಿ: ಪ್ರಧಾನಿ ನರೇಂದ್ರ ಮೋದಿ ''ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ' ಎಂದು ಬಿಜೆಪಿ ನಾಯಕ ಸುಬ್ರಮಣಿಸ್ವಾಮಿ ಗೇಲಿ ಮಾಡಿದ್ದಾರೆ.
ಈ ಕುರಿತು ಇಂದು ಟ್ವೀಟ್ ಮಾಡಿರುವ ಸುಬ್ರಮಣಿಯನ್ ಸ್ವಾಮಿ, ಭಾರತ ಆರ್ಥಿಕತೆಗೆ ಪ್ರತಿವರ್ಷ ಜಿಡಿಪಿಯ ಶೇ. 10 ರಷ್ಟು ಪ್ರಗತಿ ಸಾಧಿಸುವ ಸಾಮರ್ಥ್ಯವಿದೆ. ಇದರ ಮೂಲಕ 10 ವರ್ಷಗಳಲ್ಲಿ ನಿರುದ್ಯೋಗ ಮತ್ತು ಬಡತನವನ್ನು ಕೊನೆಗೊಳಿಸುವ ಶಕ್ತಿ ಹೊಂದಿದೆ. ಆದರೆ, ಹಣಕಾಸು ಇಲಾಖೆಗೆ ಇದರ ಸುಳಿವೇ ಇಲ್ಲ. ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥರು ಎಂದು ವ್ಯಂಗ್ಯವಾಡಿದ್ದಾರೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ನೀತಿ ಹಾಗೂ ಹಣಕಾಸು ಇಲಾಖೆ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಹಲವು ಆಡಳಿತ ವೈಫಲ್ಯಗಳನ್ನು ಪ್ರಸ್ತಾಪಿಸುವ ಮೂಲಕ ಸುಬ್ರಮಣಿಸ್ವಾಮಿ ಆಗಾಗ್ಗೆ ಟೀಕೆ ಮಾಡುತ್ತಲೇ ಇರುತ್ತಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


