ಅಕ್ರಮವಾಗಿ ದರ್ಗಾ ನಿರ್ಮಾಣ: ನೋಟಿಸ್ ನೀಡಲು ಬಂದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ, ಓರ್ವ ಸಾವು
ಅಕ್ರಮವಾಗಿ ದರ್ಗಾ ಕಟ್ಟಡವನ್ನು ಕಟ್ಟಿದ ಹಿನ್ನೆಲೆ ತೆರವುಗೊಳಿಸಲು ನೋಟಿಸ್ ನೀಡಲು ಬಂದ ಸ್ಥಳೀಯ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಗುಜರಾತ್ ನ ಜುನಾಗಢ್ ನಲ್ಲಿ ಶುಕ್ರವಾರ (ಜೂ.16 ರಂದು) ರಾತ್ರಿ ನಡೆದಿದೆ.

ಜುನಾಗಢ್ (ಗುಜರಾತ್): ಅಕ್ರಮವಾಗಿ ದರ್ಗಾ ಕಟ್ಟಡವನ್ನು ಕಟ್ಟಿದ ಹಿನ್ನೆಲೆ ತೆರವುಗೊಳಿಸಲು ನೋಟಿಸ್ ನೀಡಲು ಬಂದ ಸ್ಥಳೀಯ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಗುಜರಾತ್ ನ ಜುನಾಗಢ್ ನಲ್ಲಿ ಶುಕ್ರವಾರ (ಜೂ.16 ರಂದು) ರಾತ್ರಿ ನಡೆದಿದೆ.
ಅಕ್ರಮವಾಗಿ ದರ್ಗಾ ನಿರ್ಮಾಣ ಮಾಡಿರುವ ವಿಚಾರ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಜುನಾಗಢ್ ಮುನ್ಸಿಪಲ್ ಕಾರ್ಪೊರೇಶನ್ ಅಧಿಕಾರಿಗಳು ದರ್ಗಾ ತೆರವುಗೊಳಿಸಲು ಗಡುವು ನೀಡುವ ಸಲುವಾಗಿ ನೋಟಿಸ್ ಅಂಟಿಸಲು ಸ್ಥಳಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಪೊಲೀಸರು ಕೂಡ ಜೊತೆಯಾಗಿ ಬಂದಿದ್ದರು. ಈ ವಿಚಾರ ತಿಳಿದು ಸುಮಾರು 200-300 ಜನರು ದರ್ಗಾ ಬಳಿ ಬಂದಿದ್ದು, ಏಕಾಏಕಿ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಕಲ್ಲು ತೂರಾಟದಿಂದ ಡಿಎಸ್ ಪಿ ಸೇರಿದಂತೆ ಹಲವು ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಓರ್ವ ಮೃತಪಟ್ಟಿದ್ದಾನೆಂದು ತಿಳಿದುಬಂದಿದೆ.
ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಇನ್ನಷ್ಟು ಪೊಲೀಸ್ ಪಡೆ ದೌಡಾಯಿಸಿ ಆಶ್ರುವಾಯುಗಳನ್ನು ಬಳಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಘಟನೆ ಸಂಬಂಧ ಈವರೆಗೂ 174 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.
ಇನ್ನು ಅಕ್ರಮವಾಗಿ ನಿರ್ಮಿಸಲಾಗಿದೆ ಎನ್ನಲಾದ ಕಟ್ಟಡ ತೆರವಿಗೆ ಅಧಿಕಾರಿಗಳು 5 ದಿನಗಳ ಗಡುವನ್ನು ನೀಡಿದ್ದಾರೆ. ಸರಿಯಾದ ರೀತಿಯಲ್ಲಿ ನಿರ್ಮಾಣ ಮಾಡಿದ್ದೇ ಆದರೆ, ಅದಕ್ಕೆ ಸಂಬಂಧಪಟ್ಟ ಸೂಕ್ತ ದಾಖಲೆಗಳನ್ನು ನೀಡುವಂತೂ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


