ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸಚಿವ ಪ್ರಮಾಣಿಕ್ ಬೆಂಗಾವಲು ವಾಹನದ ಮೇಲೆ ದಾಳಿ
ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಕೇಂದ್ರ ಸಚಿವ ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ವಾಹನದ ಮೇಲೆ ತೃಣಮೂಲ ಕಾಂಗ್ರೆಸ್ ಬೆಂಬಲಿಗರು ಶನಿವಾರ ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಆಡಳಿತ ಪಕ್ಷ...

ಕೂಚ್ ಬೆಹಾರ್: ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಕೇಂದ್ರ ಸಚಿವ ನಿಸಿತ್ ಪ್ರಮಾಣಿಕ್ ಅವರ ಬೆಂಗಾವಲು ವಾಹನದ ಮೇಲೆ ತೃಣಮೂಲ ಕಾಂಗ್ರೆಸ್ ಬೆಂಬಲಿಗರು ಶನಿವಾರ ದಾಳಿ ನಡೆಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಆದರೆ ಆಡಳಿತ ಪಕ್ಷ ಆರೋಪವನ್ನು ತಳ್ಳಿಹಾಕಿದೆ.
ಸಾಹಿಬ್‌ಗಂಜ್ ಪ್ರದೇಶದಲ್ಲಿ ಮುಂಬರುವ ಪಂಚಾಯತ್ ಚುನಾವಣೆಗೆ ನಾಮಪತ್ರಗಳ ಪರಿಶೀಲನೆ ನಡೆಯುತ್ತಿರುವ ಬ್ಲಾಕ್ ಡೆವಲಪ್‌ಮೆಂಟ್ ಕಛೇರಿಗೆ ಪ್ರಾಮಾಣಿಕ್ ಅವರು ಭೇಟಿ ನೀಡಲು ಯತ್ನಿಸಿದಾಗ ಈ ಘಟನೆ ನಡೆದಿದೆ.
ಟಿಎಂಸಿ ಕಾರ್ಯಕರ್ತರು ಬಿಡಿಒ ಕಚೇರಿಗೆ ತೆರಳುವ ರಸ್ತೆ ತಡೆದು ಅಕ್ರಮ ನಡೆಸುತ್ತಿದ್ದಾರೆ ಎಂಬ ವರದಿಯ ಹಿನ್ನೆಲೆಯಲ್ಲಿ ನಾನು ಅಲ್ಲಿಗೆ ಹೋಗಿದ್ದೆ ಎಂದು ಸಚಿವರು ಹೇಳಿದ್ದಾರೆ.
"ನಾನು ಬಿಡಿಒ ಕಚೇರಿಗೆ ಭೇಟಿ ನೀಡಲು ಪ್ರಯತ್ನಿಸಿದಾಗ, ನನ್ನ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಲಾಯಿತು. ಅಲ್ಲದೆ ನಮ್ಮ ಮೇಲೆ ಬಾಂಬ್‌ಗಳನ್ನು ಸಹ ಎಸೆಯಲಾಯಿತು. ಟಿಎಂಸಿ ಕಾರ್ಯಕರ್ತರು ನಮ್ಮ ಪಕ್ಷದ ಕಾರ್ಯಕರ್ತರನ್ನು ಥಳಿಸಿದರು ಮತ್ತು ನಮ್ಮ ಅಭ್ಯರ್ಥಿಗಳ ಪತ್ರಗಳನ್ನು ನಾಶಪಡಿಸಿದರು. ಇದನ್ನು ನೋಡಿಕೊಂಡು ಪೊಲೀಸರು ಸುಮ್ಮನೆ ನಿಂತಿರುವುದು ನಾಚಿಕೆಗೇಡಿನ ಸಂಗತಿ” ಎಂದು ಪ್ರಾಮಾಣಿಕ್ ಆರೋಪಿಸಿದ್ದಾರೆ.
CrPC ಯ ಸೆಕ್ಷನ್ 144 ಅನ್ನು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತರನ್ನು BDO ಕಚೇರಿಗೆ ಪ್ರವೇಶಿಸದಂತೆ ತಡೆಯಲಾಗಿದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ. ಆದರೆ "TMC ಕಾರ್ಯಕರ್ತರಿಗೆ ಮಾತ್ರ ಕಚೇರಿ ಆವರಣದ ಹೊರಗೆ ಸೇರಲು ಅನುಮತಿಸಲಾಗಿದೆ".
ಕೇಂದ್ರ ಸಚಿವರ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಟಿಎಂಸಿ, ಈ ಆರೋಪಗಳು "ಆಧಾರರಹಿತ" ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


