ಒಡಿಶಾ: ಹಳಿತಪ್ಪಿದ ಗೂಡ್ಸ್ ರೈಲಿನ ನಾಲ್ಕು ಬೋಗಿಗಳು, ಬಾಲಸೋರ್‌ಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿ
ಒಡಿಶಾದ ರಾಯಗಢ ಜಿಲ್ಲೆಯ ಅಂಬೋಡಾಲ ಯಾರ್ಡ್‌ನಲ್ಲಿರುವ ವೇದಾಂತ ಲಿಮಿಟೆಡ್‌ನ ಘಟಕಕ್ಕೆ ತೆರಳುತ್ತಿದ್ದಾಗ ಶನಿವಾರ ಸರಕು ಸಾಗಣೆ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿವೆ. ಘಟನೆ ಬಗ್ಗೆ ಪೂರ್ವ ಕರಾವಳಿ ರೈಲ್ವೆಯಿಂದ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ಭುವನೇಶ್ವರ: ಒಡಿಶಾದ ರಾಯಗಢ ಜಿಲ್ಲೆಯ ಅಂಬೋಡಾಲ ಯಾರ್ಡ್‌ನಲ್ಲಿರುವ ವೇದಾಂತ ಲಿಮಿಟೆಡ್‌ನ ಘಟಕಕ್ಕೆ ತೆರಳುತ್ತಿದ್ದಾಗ ಶನಿವಾರ ಸರಕು ಸಾಗಣೆ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿವೆ. ಘಟನೆ ಬಗ್ಗೆ ಪೂರ್ವ ಕರಾವಳಿ ರೈಲ್ವೆಯಿಂದ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.
ಒಡಿಶಾದ ರಾಯಗಢದ ಅಂಬಾಡೋಲಾದಿಂದ ವಿಶೇಷ ಮಾರ್ಗದಲ್ಲಿ ಈ ಗೂಡ್ಸ್ ರೈಲು ಘಟಕಕ್ಕೆ ತೆರಳುತ್ತಿತ್ತು.
ಒಡಿಶಾದ ಬಾಲಸೋರ್‌ನಲ್ಲಿ ಕನಿಷ್ಠ 291 ಜನರು ಸಾವಿಗೀಡಾದ ತ್ರಿವಳಿ ರೈಲು ಅಪಘಾತದ ಕೆಲವು ವಾರಗಳ ನಂತರ ಈ ಅಪಘಾತ ಸಂಭವಿಸಿದೆ. ಜೂನ್ 2 ರಂದು ನಡೆದ ಈ ದುರಂತ ಘಟನೆಯಲ್ಲಿ ಚೆನ್ನೈ- ಕೋರಮಂಡಲ್ ಎಕ್ಸ್‌ಪ್ರೆಸ್, ಹೌರಾ- ಶಾಲಿಮಾರ್ ಎಕ್ಸ್‌ಪ್ರೆಸ್ ಮತ್ತು ಗೂಡ್ಸ್ ರೈಲು ಸೇರಿವೆ.
ಈಮಧ್ಯೆ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜೂನ್ 21ರಂದು ಒಡಿಶಾದ ಬಾಲಸೋರ್‌ಗೆ ಭೇಟಿ ನೀಡಲಿದ್ದು, ರೈಲು ಅಪಘಾತದ ಕಠಿಣ ಸಮಯದಲ್ಲಿ ರಕ್ಷಣೆಗೆ ಬಂದ ವೈದ್ಯರು, ದಾದಿಯರು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ಭೇಟಿಯಾಗಿ ಧನ್ಯವಾದ ಹೇಳಲಿದ್ದಾರೆ.
ರೈಲ್ವೆ ಸಚಿವರು ಈ ಪ್ರದೇಶದ ಸಾರ್ವಜನಿಕ ಆಡಳಿತ ಇಲಾಖೆಯನ್ನು ಭೇಟಿ ಮಾಡಲಿದ್ದಾರೆ ಮತ್ತು ಉದಾರವಾಗಿ ನೆರವು ನೀಡಿದ ಸ್ಥಳೀಯ ವ್ಯಕ್ತಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲು ಅಪಘಾತದಲ್ಲಿ ಸಾವಿಗೀಡಾದವರ ಸಂಖ್ಯೆ 291ಕ್ಕೆ ತಲುಪಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


