ದೇಶ

ಮುಸ್ಲಿಂ ಯುವಕನ ತಲೆ ಬೋಳಿಸಿ, ಮರಕ್ಕೆ ಕಟ್ಟಿ ಥಳಿಸಿ, 'ಜೈ ಶ್ರೀರಾಮ್' ಘೋಷಣೆ ಕೂಗುವಂತೆ ಒತ್ತಾಯ!

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ 23 ವರ್ಷದ ಮುಸ್ಲಿಂ ಯುವಕನನ್ನು ಕೆಲವರು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಅಷ್ಟೇ ಅಲ್ಲ, ಯುವಕನಿಗೆ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ತಲೆ ಬೋಳಿಸಿದ್ದಾರೆ.

ಮುಸ್ಲಿಂ ಯುವಕನ ತಲೆ ಬೋಳಿಸಿ, ಮರಕ್ಕೆ ಕಟ್ಟಿ ಥಳಿಸಿ, 'ಜೈ ಶ್ರೀರಾಮ್' ಘೋಷಣೆ ಕೂಗುವಂತೆ ಒತ್ತಾಯ!
ಮೊಹಮ್ಮದ್ ಸಾಹಿಲ್ ಖಾನ್
Published On :

ಬುಲಂದ್‌ಶಹರ್: ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ 23 ವರ್ಷದ ಮುಸ್ಲಿಂ ಯುವಕನನ್ನು ಕೆಲವರು ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಅಷ್ಟೇ ಅಲ್ಲ, ಯುವಕನಿಗೆ ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಒತ್ತಾಯಿಸಿ ತಲೆ ಬೋಳಿಸಿದ್ದಾರೆ.

ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ಯುವಕನನ್ನು ಈ ಜನರು ಹಿಡಿದಿದ್ದಾರೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಜೂನ್ 13ರಂದು ಜಿಲ್ಲೆಯ ಕಾಕೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಶನಿವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ವಿಡಿಯೋವನ್ನು ಗಮನಿಸಿದ ಪೊಲೀಸರು ವ್ಯಕ್ತಿಯ ತಂದೆಯ ದೂರನ್ನು ಸ್ವೀಕರಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಸಂತ್ರಸ್ತನನ್ನು ದಿನಗೂಲಿ ಕಾರ್ಮಿಕ ಸಾಹಿಲ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.