ತಮಿಳುನಾಡಿನಲ್ಲಿ ಭೀಕರ ಅಪಘಾತ: ಎರಡು ಬಸ್'ಗಳು ಮುಖಾಮುಖಿ ಡಿಕ್ಕಿ, ಇಬ್ಬರ ಸಾವು, 30 ಮಂದಿಗೆ ಗಾಯ
ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಎರಡು ಖಾಸಗಿ ಬಸ್ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಕನಿಷ್ಠ 30 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಎರಡು ಖಾಸಗಿ ಬಸ್ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಕನಿಷ್ಠ 30 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.
ಪನ್ರುತಿಯ ಮೇಲ್ಪಟ್ಟಂಪಕ್ಕಂನಲ್ಲಿ ಅಪಘಾತ ಸಂಭವಿಸಿದ್ದು, ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತಕ್ಕೆ ಕಾರಣಗಳು ತಿಳಿದುಬಂದಿಲ್ಲ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಬಸ್ಸೊಂದರ ಮುಂಭಾಗದ ಟೈರ್ ಒಡೆದ ಪರಿಣಾಮ ವಾಹನ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಬಸ್ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


