ಮೈನ್ಪುರಿ: ಕಸ ಹಾಕುವ ವಿಚಾರವಾಗಿ ಜಗಳ: ಗುಂಡೇಟಿಗೆ ಒಂದೇ ಕುಟುಂಬದ ಮೂವರ ಬಲಿ!
ಕಸ ಸುರಿಯುವ ವಿಚಾರವಾಗಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಗುಂಡು ಹಾರಿಸಿ ಮೂವರನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಡೆದಿದೆ.

ಲಖನೌ: ಕಸ ಸುರಿಯುವ ವಿಚಾರವಾಗಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಗುಂಡು ಹಾರಿಸಿ ಮೂವರನ್ನು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಡೆದಿದೆ.
ಅತಿರಾಮ್ಪುರ್ ಎಂಬ ಗ್ರಾಮದಲ್ಲಿ ರಸ್ತೆ ಮೇಲೆ ಕಸ ಸುರಿದಿದ್ದಕ್ಕೆ ಕೆಲವು ಮಂದಿಯ ನಡುವೆ ಈ ಘರ್ಷಣೆ ಆರಂಭವಾಗಿತ್ತು ಎಂದು ಎಸ್ ಪಿ ವಿನೋದ್ ಕುಮಾರ್ ಹೇಳಿದ್ದಾರೆ.
ವಿವಾದ ತೀವ್ರಸ್ವರೂಪ ಪಡೆದುಕೊಂಡು ಓರ್ವ ವ್ಯಕ್ತಿ ಕಯಾಮ್ ಸಿಂಗ್ (85) ರಾಮೇಶ್ವರ್ ಸಿಂಗ್ (75) ಮಮತಾ ದೇವಿ (28) ನ್ನು ಹತ್ಯೆ ಮಾಡಿದ್ದಾನೆ. ಸರೋಜಿನಿ ದೇವಿ ಎಂಬುವವರು ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಆರೋಪಿ ರಾಹುಲ್ ಯಾದವ್ ಪತ್ತೆಗೆ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಎಸ್ ಪಿ ಕುಮಾರ್ ಹೇಳಿದರು. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


