ಪ್ರತಿಭಟನೆ ನಂತರ ಶಿವಾಜಿ ಪ್ರತಿಮೆ ತೆರವು ಆದೇಶ ಹಿಂಪಡೆದ ಗೋವಾ ಪಂಚಾಯತ್
ತೀವ್ರ ಪ್ರತಿಭಟನೆಯ ನಂತರ ರಸ್ತೆಬದಿಯಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ತೆರವುಗೊಳಿಸುವಂತೆ ಗೋವಾದ ಕಲಂಗುಟ್ ಪಂಚಾಯತ್ ಹೊರಡಿಸಿದ್ದ ಆದೇಶವನ್ನು ಮಂಗಳವಾರ ಹಿಂಪಡೆಯಲಾಗಿದೆ.

ಪಣಜಿ: ತೀವ್ರ ಪ್ರತಿಭಟನೆಯ ನಂತರ ರಸ್ತೆಬದಿಯಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯನ್ನು ತೆರವುಗೊಳಿಸುವಂತೆ ಗೋವಾದ ಕಲಂಗುಟ್ ಪಂಚಾಯತ್ ಹೊರಡಿಸಿದ್ದ ಆದೇಶವನ್ನು ಮಂಗಳವಾರ ಹಿಂಪಡೆಯಲಾಗಿದೆ.
ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಉತ್ತರ ಗೋವಾ ಜಿಲ್ಲಾಡಳಿತ, ಪಂಚಾಯತ್‌ನ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಇಂದು ಮಧ್ಯಾಹ್ನ ತಿಳಿಸಿದೆ.
ಇದಕ್ಕೂ ಮುನ್ನ ಕನಿಷ್ಠ 100 ಜನರನ್ನೊಳಗೊಂಡ ಗುಂಪು ಕೇಸರಿ ಧ್ವಜಗಳನ್ನು ಹಿಡಿದುಕೊಂಡು ಬೆಳಗ್ಗೆ ಪಂಚಾಯತ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಈ ವೇಳೆ ಕೆಲವರು ಪಂಚಾಯತ್ ಕಚೇರಿ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದರು.
ಸೋಮವಾರ ಹೊರಡಿಸಿದ ಆದೇಶದಲ್ಲಿ ವಿದ್ಯುತ್ ಕಂಬ ಹಾಕಲು ಶಿವಾಜಿ ಮಹಾರಾಜರ ಪ್ರತಿಮೆಯನ್ನು ರಸ್ತೆ ಬದಿಯಿಂದ ತೆಗೆದುಹಾಕುವಂತೆ ಸ್ಥಳೀಯ ಸಂಸ್ಥೆಗೆ ಸೂಚಿಸಲಾಗಿತ್ತು.
ಪಂಚಾಯಿತಿ ಆದೇಶವನ್ನು ಹಿಂಪಡೆದರೂ ತೃಪ್ತರಾಗದ ಪ್ರತಿಭಟನಾಕಾರರು, ಕಲಂಗುಟ್ ಪಂಚಾಯತ್ ಸರಪಂಚ್ ಜೋಸೆಫ್ ಸಿಕ್ವೇರಾ ಅವರು ಈ ಆದೇಶ ಹೊರಡಿಸಿದ್ದಕ್ಕಾಗಿ ಕ್ಷಮೆಯಾಚಿಸುವವರೆಗೂ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


