ರಾಜಸ್ಥಾನದಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ; ಆರೋಪಿಗಳ ಪೈಕಿ ಇಬ್ಬರು ಪೊಲೀಸರು!
ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದ್ದು, ಘಟನೆಯಲ್ಲಿನ ಶಂಕಿತ ಪಾತ್ರಕ್ಕಾಗಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಜೈಪುರ: ರಾಜಸ್ಥಾನದ ಬಿಕಾನೇರ್ ಜಿಲ್ಲೆಯಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಲಾಗಿದ್ದು, ಘಟನೆಯಲ್ಲಿನ ಶಂಕಿತ ಪಾತ್ರಕ್ಕಾಗಿ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ಖಾಜುವಾಲಾ ಪ್ರದೇಶದಲ್ಲಿ 20 ವರ್ಷದ ಯುವತಿಯ ಶವ ಪತ್ತೆಯಾಗಿದೆ ಎಂದು ಪೊಲೀಸ್ ಮಹಾನಿರೀಕ್ಷಕ (ಐಜಿ) ಓಂ ಪ್ರಕಾಶ್ ತಿಳಿಸಿದ್ದಾರೆ.
'ಖಾಜುವಾಲಾ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳು ಸೇರಿದಂತೆ ಮೂವರು ವ್ಯಕ್ತಿಗಳು ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆಕೆಯ ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಕೂಡಲೇ ಇಬ್ಬರೂ ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ' ಎಂದರು.
ಸಂತ್ರಸ್ತೆಯ ಕುಟುಂಬದ ಸದಸ್ಯರು ಮರಣೋತ್ತರ ಪರೀಕ್ಷೆ ನಡೆಸಲು ಒಪ್ಪಿಗೆ ನೀಡಲು ನಿರಾಕರಿಸಿದ್ದಾರೆ ಮತ್ತು ಎಲ್ಲಾ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದಾರೆ. ‘ಧರಣಿ’ಯನ್ನೂ ನಡೆಸಿದರು.
ಇದನ್ನೂ ಓದಿ: 19 ವರ್ಷದ ಯುವತಿ ಮೇಲೆ ಇಬ್ಬರು ಸಹೋದರರಿಂದ ಅತ್ಯಾಚಾರ
ಮರಣೋತ್ತರ ಪರೀಕ್ಷೆಗಾಗಿ ಸಂತ್ರಸ್ತೆಯ ಕುಟುಂಬ ಸದಸ್ಯರು ಮತ್ತು ಸಂಬಂಧಿಕರ ಮನವೊಲಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ತೇಜಸ್ವಿನಿ ಗೌತಮ್ ಹೇಳಿದ್ದಾರೆ.
ಭಾರತೀಯ ದಂಡ ಸಂಹಿತೆಯ 376-ಡಿ (ಗ್ಯಾಂಗ್ ರೇಪ್) ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಖಜುವಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರಾದ ಮನೋಜ್ ಮತ್ತು ಭಗೀರಥ ಮೂರನೇ ಆರೋಪಿಯೊಂದಿಗೆ ಯುವತಿಯನ್ನು ಮನೆಗೆ ಕರೆದೊಯ್ದು ಅಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಸಂತ್ರಸ್ತೆ ಮತ್ತು ಆರೋಪಿಗಳು ಪರಸ್ಪರ ಪರಿಚಿತರು ಎಂದು ಕರೆ ದಾಖಲೆಗಳನ್ನು ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.
ಈ ನಡುವೆ ಇಬ್ಬರು ಕಾನ್‌ಸ್ಟೆಬಲ್‌ಗಳ ಪಾತ್ರದ ಕುರಿತು ತನಿಖೆ ನಡೆಸಲಾಗುತ್ತಿದೆ. ಹೆಚ್ಚುವರಿ ಎಸ್ಪಿ ದೀಪಕ್ ಶರ್ಮಾ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ಪ್ರತಿಪಕ್ಷ ಬಿಜೆಪಿ ಘಟನೆಯ ಬಗ್ಗೆ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರತಾಪ್ ಸಿಂಗ್ ಖಚರಿಯಾವಾಸ್ ಜೈಪುರದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


