ದೇಶ

ಉತ್ತರ ಪ್ರದೇಶ: ಅತ್ಯಾಚಾರದಿಂದ ನೊಂದ ಬಾಲಕಿ ಆತ್ಮಹತ್ಯೆಗೆ ಶರಣು

ಅತ್ಯಾಚಾರದಿಂದ ನೊಂದ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಹೈದರ್‌ಗಢ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶ: ಅತ್ಯಾಚಾರದಿಂದ ನೊಂದ ಬಾಲಕಿ ಆತ್ಮಹತ್ಯೆಗೆ ಶರಣು
ಸಂಗ್ರಹ ಚಿತ್ರ
Published On :

ಬಾರಾಬಂಕಿ: ಅತ್ಯಾಚಾರದಿಂದ ನೊಂದ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಹೈದರ್‌ಗಢ ಪ್ರದೇಶದಲ್ಲಿ ನಡೆದಿದೆ.

ಪ್ರಕರಣ ಸಂಬಂಧ ಬಾಲಕಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿ, ಹೇಳಿಕೆ ದಾಖಲಿಸಬೇಕಿತ್ತು. ಆದರೆ, ಅಷ್ಟರಲ್ಲಾಗಲೇ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ನಡುವೆ ಪ್ರಕರಣ ಸಂಬಂಧ ಕರ್ತವ್ಯ ಲೋಪವೆಸಗಿದ ತನಿಖಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.

ಜೂನ್ 17 ರಂದು ಹೈದರ್‌ಗಢ ಪೊಲೀಸ್ ಠಾಣೆಯಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದ ಪ್ರಕರಣವೊಂದು ದಾಖಲಾಗಿತ್ತು. ಪ್ರಕರಣ ಸಂಬಂಧ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ. ಪ್ರಕರಣ ಸಂಬಂಧ ಬಾಲಕಿ ಹೇಳಿಕೆ ನೀಡಲು ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕಿತ್ತು. ಅಷ್ಟರಲ್ಲಾಗಲೇ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ.

ಈ ನಡುವೆ ಪೊಲೀಸರ ವಿರುದ್ಧ ಬಾಲಕಿಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣ ಹಿಂಪಡೆಯುವಂತೆ ಆರೋಪಿ ಬೆದರಿಕೆ ಹಾಕುತ್ತಿದ್ದ. ಆತನನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದರಿಂದಲೇ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಹೇಳಿದ್ದಾರೆ.

ಆರೋಪ ಕುರಿತು ಪ್ರತಿಕ್ರಿಯೆ ನೀಡಿರುವ ಅಧಿಕಾರಿಗಳು, ಆರೋಪಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕರ್ತವ್ಯ ಲೋಪದ ಕಾರಣಕ್ಕಾಗಿ ತನಿಖಾಧಿಕಾರಿ ಯೋಗೇಂದ್ರ ಪ್ರತಾಪ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.