ಬಿಹಾರ: ನಿರ್ಮಾಣ ಹಂತದಲ್ಲಿದ್ದ ಮತ್ತೊಂದು ಮೇಲ್ಸೇತುವೆ ಕುಸಿತ
ಗಂಗಾ ನದಿಯ ಮೇಲ್ಭಾಗದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆ ಖಗಾರಿಯಾ ಜಿಲ್ಲೆಯಲ್ಲಿ ಕುಸಿದುಬಿದ್ದ ಘಟನೆ ನಡೆದ 3 ವಾರಗಳಲ್ಲಿ ಇಂಥಹದ್ದೇ ಮತ್ತೊಂದು ಘಟನೆ ನಡೆದಿದೆ.

ಪಾಟ್ನ: ಗಂಗಾ ನದಿಯ ಮೇಲ್ಭಾಗದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆ ಖಗಾರಿಯಾ ಜಿಲ್ಲೆಯಲ್ಲಿ ಕುಸಿದುಬಿದ್ದ ಘಟನೆ ನಡೆದ 3 ವಾರಗಳಲ್ಲಿ ಇಂಥಹದ್ದೇ ಮತ್ತೊಂದು ಘಟನೆ ನಡೆದಿದೆ.
ಕಿಶನ್ ಗಂಜ್ ಜಿಲ್ಲೆಯಲ್ಲಿರುವ ಮೇಲ್ಸೇತುವೆ ಈಗ ಕುಸಿದುಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಟ್ನಾದಿಂದ ಸುಮಾರು 400 ಕಿ.ಮೀ ದೂರದಲ್ಲಿರುವ ಮೇಚಿ ನದಿಗೆ ಕಟ್ಟಲಾಗಿದ್ದ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಎನ್ಎಹೆಚ್ಐ ನ ಯೋಜನಾ ನಿರ್ದೇಶಕ ಅರವಿಂದ್ ಕುಮಾರ್ ಹೇಳಿದ್ದಾರೆ.
ಎನ್ ಹೆಚ್-327E ಯಶಸ್ವಿಯಾಗಿ ಪೂರ್ಣಗೊಂಡಿದ್ದರೆ, ಕಿಶನ್ ಗಂಜ್- ಕಥಿಹಾರ್ ನಡುವೆ ಸಂಪರ್ಕ ಕಲ್ಪಿಸಬೇಕಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಅವಘಡದಲ್ಲಿ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಘಟನೆ ಬಗ್ಗೆ ತನಿಖೆ ನಡೆಸಲು ಐವರು ಸದಸ್ಯರಿರುವ ತಜ್ಞರ ಸಮಿತಿ ನೇಮಕ ಮಾಡಲಾಗಿದೆ.
ಪೈಲಿಂಗ್ ಪ್ರಕ್ರಿಯೆ (piling process) ವೇಳೆ ಮಾನವ ದೋಷದಿಂದಾಗಿ ಈ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಜೂ.04 ರಂದು ಖಗಾರಿಯಾ- ಭಗಲ್ ಪುರ ಜಿಲ್ಲೆಗೆ ಸಂಪರ್ಕ ಕಲ್ಪಿಸಬೇಕಿದ್ದ ಮೇಲ್ಸೇತುವೆಯೊಂದು ಕುಸಿದುಬಿದ್ದಿತ್ತು. ಘಟನೆಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


