ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಮುಂದೆ ಸಾಗೋಣ: ರಾಹುಲ್ ಗಾಂಧಿಗೆ ಕೇಜ್ರಿವಾಲ್ ಸಲಹೆ
ದೆಹಲಿ ಆಡಳಿತ ಸೇವೆಗಳಿಗೆ ಸಂಬಂಧಿಸಿದ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ಕುರಿತು ಕಾಂಗ್ರೆಸ್‌ನ ನಿಲುವಿನ ಗೊಂದಲದ ನಡುವೆಯೇ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಪಾಟ್ನಾದಲ್ಲಿ ನಡೆದ ವಿರೋಧ ಪಕ್ಷಗಳ...

ನವದೆಹಲಿ: ದೆಹಲಿ ಆಡಳಿತ ಸೇವೆಗಳಿಗೆ ಸಂಬಂಧಿಸಿದ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ಕುರಿತು ಕಾಂಗ್ರೆಸ್‌ನ ನಿಲುವಿನ ಗೊಂದಲದ ನಡುವೆಯೇ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಪಾಟ್ನಾದಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಾಗಿ ಮುನ್ನಡೆಯುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಹೇಳಿದ್ದಾರೆ ಎಂದು ಎಎಪಿ ಮೂಲಗಳು ಶನಿವಾರ ತಿಳಿಸಿವೆ.
"ಅರವಿಂದ ಕೇಜ್ರಿವಾಲ್ ಅವರು ನೇರವಾಗಿ ರಾಹುಲ್ ಗಾಂಧಿಯವರೊಂದಿಗೆ (ಸುಗ್ರೀವಾಜ್ಞೆ ವಿಷಯದ ಬಗ್ಗೆ) ಮಾತನಾಡಿದ್ದಾರೆ ಮತ್ತು ಯಾವುದೇ ಸಮಸ್ಯೆ ಇದ್ದರೆ ಚಹಾ ಕುಡಿಯುವ ಮೂಲಕ ಪರಿಹರಿಸಿಕೊಳ್ಳೊಣ ಎಂದು ಹೇಳಿದ್ದಾರೆ.
ಶುಕ್ರವಾರ ನಡೆದ ಪ್ರತಿಪಕ್ಷಗಳ ಸಭೆಯಲ್ಲಿ, ಕೇಜ್ರಿವಾಲ್ ಅವರು ಭಿನ್ನಾಭಿಪ್ರಾಯಗಳನ್ನು ಮರೆತು ಒಟ್ಟಾಗಿ ಮುನ್ನಡೆಯುವ ಅವಶ್ಯಕತೆಯಿದೆ ಎಂದು ರಾಹುಲ್ ಗಾಂಧಿಗೆ ಹೇಳಿರುವುದಾಗಿ ಅವರ ಪಕ್ಷದ ಮೂಲಗಳು ತಿಳಿಸಿವೆ.
ಪರಿಸ್ಥಿತಿಯನ್ನು ಗಮನಿಸಿದರೆ, ಶಿಮ್ಲಾದಲ್ಲಿ ನಿಗದಿಯಾಗಿರುವ ವಿರೋಧ ಪಕ್ಷಗಳ ಮುಂದಿನ ಸಭೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ಎಎಪಿ ಇನ್ನೂ ನಿರ್ಧರಿಸಿಲ್ಲ ಎಂದು ಅವರು ಹೇಳಿದ್ದಾರೆ.
ಜುಲೈ 10 ಅಥವಾ 12 ರಂದು ಶಿಮ್ಲಾದಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಮತ್ತೊಂದು ಪ್ರತಿಪಕ್ಷಗಳ ಸಭೆ ನಡೆಯುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


