ಅಸ್ಸಾಂ ಪ್ರವಾಹ: 120ಕ್ಕೂ ಹೆಚ್ಚು ಜನರನ್ನು ರಕ್ಷಿಸಿದ ಎನ್‌ಡಿಆರ್‌ಎಫ್
ಅಸ್ಸಾಂನಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಹತ್ತು ತಂಡಗಳನ್ನು ನಿಯೋಜಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ಭಾನುವಾರ 120ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ

ನವದೆಹಲಿ: ಅಸ್ಸಾಂನಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಹತ್ತು ತಂಡಗಳನ್ನು ನಿಯೋಜಿಸಿರುವ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ಭಾನುವಾರ 120ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಪ್ರವಾಹಕ್ಕೆ ಸಿಲುಕಿದ್ದಾರೆ. ಆದರೆ ನೀರಿನ ಮಟ್ಟವು ಇಂದು ಕಡಿಮೆಯಾಗಲು ಪ್ರಾರಂಭಿಸಿದೆ.
"ಅಸ್ಸಾಂನಲ್ಲಿ ಒಟ್ಟು ಹತ್ತು ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದ್ದು, ಈ ತಂಡಗಳು ತಗ್ಗು ಪ್ರದೇಶಗಳಿಂದ ರಕ್ಷಣಾ ಮತ್ತು ಸ್ಥಳಾಂತರಿಸುವಿಕೆ ಕಾರ್ಯಾಚರಣೆ ನಡೆಸುತ್ತಿದ್ದು, ಇಲ್ಲಿಯವರೆಗೆ, 123 ವ್ಯಕ್ತಿಗಳು ಮತ್ತು ಹಲವಾರು ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ" ಎಂದು ಎನ್‌ಡಿಆರ್‌ಎಫ್ ವಕ್ತಾರರು ತಿಳಿಸಿದ್ದಾರೆ.
ಪ್ರತಿ NDRF ತಂಡವು ಸುಮಾರು 35-40 ಸಿಬ್ಬಂದಿಯನ್ನು ಹೊಂದಿದ್ದು, ಈ ತಂಡಗಳು ಪರಿಹಾರ ಸಾಮಗ್ರಿ ವಿತರಣೆಯಲ್ಲಿ ಸ್ಥಳೀಯ ಅಧಿಕಾರಿಗಳಿಗೆ ಸಹಾಯ ಮಾಡುತ್ತಿವೆ ಎಂದು ವಕ್ತಾರರು ಹೇಳಿದ್ದಾರೆ.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ತಗ್ಗು ಪ್ರದೇಶಗಳಲ್ಲಿ ತಂಡಗಳು ವಿಚಕ್ಷಣಾ ಕಾರ್ಯ ನಡೆಸುತ್ತಿವೆ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


