ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲೇ ಬೇಕು: ಸಿಪಿಐ ನಾಯಕ ಡಿ ರಾಜಾ
ಭಾರತದ ಪ್ರಜಾಪ್ರಭುತ್ವ ಉಳಿಸಲು ಭಾರತೀಯ ಜನತಾ ಪಕ್ಷವನ್ನು ಎಲ್ಲ ರೀತಿಯಿಂದಲೂ ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಪ್ರಧಾನ ಕಾರ್ಯದರ್ಶಿ ಭಾನುವಾರ ಹೇಳಿದ್ದಾರೆ.

ನವದೆಹಲಿ: ಭಾರತದ ಪ್ರಜಾಪ್ರಭುತ್ವ ಉಳಿಸಲು ಭಾರತೀಯ ಜನತಾ ಪಕ್ಷವನ್ನು ಎಲ್ಲ ರೀತಿಯಿಂದಲೂ ಅಧಿಕಾರದಿಂದ ಕಿತ್ತೊಗೆಯಬೇಕು ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಪ್ರಧಾನ ಕಾರ್ಯದರ್ಶಿ ಭಾನುವಾರ ಹೇಳಿದ್ದಾರೆ.
ಸಂವಿಧಾನ ,ಪ್ರಜಾಪ್ರಭುತ್ವ ಉಳಿಸಲು ಬಿಜೆಪಿ ಸೋಲಿಸುವುದು ಎಡ ಪಕ್ಷಗಳಿಗೆ ಮಾತ್ರವಲ್ಲ, ಎಲ್ಲಾ ಜಾತ್ಯತೀತ ಪಕ್ಷಗಳಿಗೆ ಪ್ರಾಥಮಿಕ ಉದ್ದೇಶವಾಗಿದೆ ಎಂದು ಅವರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದರು.
ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ತಂತ್ರ, ಮೈತ್ರಿ, ಸೀಟು ಹಂಚಿಕೆಯ ಪ್ರಶ್ನೆಯನ್ನು ರಾಜ್ಯ ಮಟ್ಟದಲ್ಲಿ ವ್ಯವಹರಿಸಬೇಕು, ಪ್ರತಿ ರಾಜ್ಯದಲ್ಲಿನ ರಾಜಕೀಯ ಶಕ್ತಿಗಳ ಸಮತೋಲನವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ"
ಇದನ್ನೇ ಪ್ರತಿಪಕ್ಷಗಳ ಸಭೆಯಲ್ಲಿ ಸಿಪಿಐ ಹೇಳಿದೆ ಎಂದರು.
"ಎಲ್ಲಾ ರಾಜ್ಯಗಳಲ್ಲಿ ಪರಿಸ್ಥಿತಿ ಒಂದೇ ಆಗಿಲ್ಲ. ರಾಜ್ಯದಿಂದ ರಾಜ್ಯಕ್ಕೆ ಪರಿಸ್ಥಿತಿ ಬದಲಾಗುತ್ತದೆ, ಆದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಹೇಗೆ ಸೋಲಿಸುವುದು ಎಂಬುದು ಕಾರ್ಯತಂತ್ರವಾಗಬೇಕು ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


