ಬಕ್ರಿದ್ ದಿನ ಹತ್ಯೆ ಮಾಡಿದ ಪ್ರಾಣಿಗಳ ಚಿತ್ರ ಹಂಚಿಕೊಳ್ಳಬೇಡಿ: ಮುಸ್ಲಿಮರಿಗೆ ಜಮೀಯತ್ ಮನವಿ
ಪ್ರಮುಖ ಮುಸ್ಲಿಂ ಸಂಘಟನೆ ಜಮೀಯತ್ ಉಲೇಮಾ-ಎ-ಹಿಂದ್ ಸೋಮವಾರ ಮುಸ್ಲಿಮರು ಈದ್-ಉಲ್-ಅಝಾದ ವೇಳೆ ಪ್ರಾಣಿಗಳನ್ನು ಬಲಿ ನೀಡುವಾಗ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಮತ್ತು ಹತ್ಯೆ ಮಾಡಿದ...

ನವದೆಹಲಿ: ಪ್ರಮುಖ ಮುಸ್ಲಿಂ ಸಂಘಟನೆ ಜಮೀಯತ್ ಉಲೇಮಾ-ಎ-ಹಿಂದ್ ಸೋಮವಾರ ಮುಸ್ಲಿಮರು ಈದ್-ಉಲ್-ಅಝಾದ ವೇಳೆ ಪ್ರಾಣಿಗಳನ್ನು ಬಲಿ ನೀಡುವಾಗ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಮತ್ತು ಹತ್ಯೆ ಮಾಡಿದ ಪ್ರಾಣಿಗಳ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಬಾರದು ಎಂದು ಸೋಮವಾರ ಮನವಿ ಮಾಡಿದೆ.
ತ್ಯಾಗದ ಹಬ್ಬ ಎಂದೂ ಕರೆಯಲ್ಪಡುವ ಈದ್ ಉಲ್-ಅಝಾವನ್ನು ಗುರುವಾರ ಆಚರಿಸಲಾಗುತ್ತದೆ.
ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಸ್ಲಿಮರು ಪ್ರಾಣಿಗಳನ್ನು ಬಲಿ ನೀಡುವಾಗ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಮುಖ್ಯವಾಗಿದೆ ಎಂದು ಜಮೀಯತ್ ಉಲೇಮೆ-ಎ-ಹಿಂದ್ ಮುಖ್ಯಸ್ಥ ಮೌಲಾನಾ ಅರ್ಷದ್ ಮದನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹತ್ಯೆ ಮಾಡಿದ ಪ್ರಾಣಿಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬೇಡಿ ಎಂದು ಅವರು ಕರೆ ನೀಡಿದ್ದಾರೆ.
ಮುಸ್ಲಿಮರು 'ಕುರ್ಬಾನಿ(ಬಲಿ) ಮಾಡುವಾಗ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಮತ್ತು ನಿಷೇಧಿತ ಪ್ರಾಣಿಗಳನ್ನು ಬಲಿ ನೀಡಬಾರದು ಎಂದು ಮದನಿ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


