ಮಾಜಿ ಸಂಸದ ಸೇರಿದಂತೆ 35 ಬಿಆರ್‌ಎಸ್ ನಾಯಕರು ಕಾಂಗ್ರೆಸ್ ಸೇರಲು ನಿರ್ಧಾರ
ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್ ಸೇರಿದಂತೆ ಭಾರತ ರಾಷ್ಟ್ರ ಸಮಿತಿ(ಬಿಆರ್ ಎಸ್)ನ 35 ನಾಯಕರು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ ಮತ್ತು...

ನವದೆಹಲಿ: ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್ ಸೇರಿದಂತೆ ಭಾರತ ರಾಷ್ಟ್ರ ಸಮಿತಿ(ಬಿಆರ್ ಎಸ್)ನ 35 ನಾಯಕರು ಕಾಂಗ್ರೆಸ್ ಸೇರುವುದಾಗಿ ಘೋಷಿಸಿದ್ದಾರೆ ಮತ್ತು ಸೋಮವಾರ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ಉನ್ನತ ನಾಯಕರನ್ನು ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜುಲೈ ಮೊದಲ ವಾರದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ನೇತೃತ್ವದಲ್ಲಿ ತೆಲಂಗಾಣದ ಖಮ್ಮಮ್‌ನಲ್ಲಿ ನಡೆಯಲಿರುವ ಸಾರ್ವಜನಿಕ ರ್ಯಾಲಿಯಲ್ಲಿ ಬಿಆರ್ ಎಸ್ ನಾಯಕರು ಅಧಿಕೃತವಾಗಿ ಕಾಂಗ್ರೆಸ್‌ಗೆ ಸೇರಲಿದ್ದಾರೆ. ರೆಡ್ಡಿ ಅವರು ಈ ಹಿಂದೆ ಖಮ್ಮಂನ ಬಿಆರ್‌ಎಸ್ ಸಂಸದರಾಗಿದ್ದರು.
ಈ ವರ್ಷಾಂತ್ಯದಲ್ಲಿ ತೆಲಂಗಾಣ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರ ಪಕ್ಷಾಂತರ ಪರ್ವ ಆರಂಭವಾಗಿದೆ.
ಬಿಆರ್ ಎಸ್ ನಾಯಕರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆಸಿ ವೇಣುಗೋಪಾಲ್ ಮತ್ತು ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ಎ ರೇವಂತ್ ರೆಡ್ಡಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


