ಪಿಎಂ-ಸಿಎಂ ಇಂಟರ್ನ್‌ಶಿಪ್ ಮೂಲಕ 7.5 ಲಕ್ಷ ಯುವಕರಿಗೆ ಉದ್ಯೋಗ: ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದ ಕೋಟ್ಯಂತರ ಜನರ ಜೀವನಾಧಾರವಾಗಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ(ಎಂಎಸ್‌ಎಂಇ) ಮಹತ್ವವನ್ನು ಒತ್ತಿಹೇಳಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ರಾಜ್ಯದಲ್ಲಿ...

ಲಖನೌ: ಉತ್ತರ ಪ್ರದೇಶದ ಕೋಟ್ಯಂತರ ಜನರ ಜೀವನಾಧಾರವಾಗಿರುವ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ(ಎಂಎಸ್‌ಎಂಇ) ಮಹತ್ವವನ್ನು ಒತ್ತಿಹೇಳಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ರಾಜ್ಯದಲ್ಲಿ ಚಾಲನೆಯಲ್ಲಿರುವ ಪ್ರಧಾನಿ ಮತ್ತು ಮುಖ್ಯಮಂತ್ರಿಗಳ ಇಂಟರ್ನ್‌ಶಿಪ್ ಕಾರ್ಯಕ್ರಮದ ಮೂಲಕ 7.5 ಲಕ್ಷ ಯುವಕರಿಗೆ ಉದ್ಯೋಗ ಒದಗಿಸಲಾಗುವುದು ಎಂದು ಮಂಗಳವಾರ ಹೇಳಿದ್ದಾರೆ.
ಪೂರ್ವಾಂಚಲ, ಬುಂದೇಲ್‌ಖಂಡ್ ಮತ್ತು ಗಂಗಾ ಎಕ್ಸ್‌ಪ್ರೆಸ್‌ವೇಗಳ ಉದ್ದಕ್ಕೂ ಭೂ ವಿಸ್ತರಣೆಗಳನ್ನು ಗುರುತಿಸಿ ಎಂಎಸ್‌ಎಂಇ ಕ್ಲಸ್ಟರ್‌ಗಳನ್ನು ಸ್ಥಾಪಿಸುವಂತೆ ಎಂಎಸ್‌ಎಂಇ ಇಲಾಖೆಗೆ ಸಿಎಂ ಯೋಗಿ ನಿರ್ದೇಶನ ನೀಡಿದ್ದಾರೆ.
ಎಂಎಸ್‌ಎಂಇ ವಲಯದ ಉದ್ಯಮಿಗಳಿಗೆ ಅವರ ಅವಶ್ಯಕತೆಗಳಿಗೆ ಅನುಗುಣವಾಗಿ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ ಲಖನೌ, ವಾರಣಾಸಿ ಮತ್ತು ಆಗ್ರಾದಲ್ಲಿ ಯೂನಿಟಿ ಮಾಲ್‌ಗಳನ್ನು ಸ್ಥಾಪಿಸುವ ಯೋಜನೆಗಳನ್ನು ಮುಂದಕ್ಕೆ ಕೊಂಡೊಯ್ಯುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದರು.
“ಹಿಂದಿನ ಸರ್ಕಾರಗಳ ಸಹಕಾರದ ಕೊರತೆಯಿಂದಾಗಿ, ಈ ಕ್ಷೇತ್ರದ ಉದ್ಯಮಿಗಳು ಹತಾಶೆ ಮತ್ತು ನಿರಾಶೆಗೆ ಒಳಗಾಗಿದ್ದರು. ಆದರೆ, ಕಳೆದ ಆರು ವರ್ಷಗಳಲ್ಲಿ, ಪ್ರಧಾನಿ ಮೋದಿಯವರ ಸ್ಫೂರ್ತಿಯೊಂದಿಗೆ, ನಮ್ಮ ಸರ್ಕಾರವು ರಾಜ್ಯಾದ್ಯಂತ ಸುಮಾರು 96 ಲಕ್ಷ ಎಂಎಸ್‌ಎಂಇ ಘಟಕಗಳು ಆರಂಭವಾಗಿದ್ದು, ಕೋಟ್ಯಂತರ ಜನರಿಗೆ ಜೀವನೋಪಾಯದ ಮೂಲವಾಗಿವೆ ಎಂದು ಉತ್ತರ ಪ್ರದೇಶ ಸಿಎಂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


