ಅಲಹಾಬಾದ್ ಹೈಕೋರ್ಟ್ ನಲ್ಲಿ ಇಂದು 'ಆದಿಪುರುಷ' ವಿರುದ್ಧದ ಅರ್ಜಿಗಳ ವಿಚಾರಣೆ
ಇತ್ತೀಚಿಗೆ ತೆರೆಕಂಡ ಪ್ರಭಾಸ್ ಅಭಿನಯದ 'ಆದಿಪುರುಷ' ಚಿತ್ರದ ವಿರುದ್ಧದ ಅರ್ಜಿಗಳ ವಿಚಾರಣೆ ಅಲಹಾಬಾದ್ ಹೈಕೋರ್ಟ್ ನಲ್ಲಿ ಇಂದು ನಡೆಯಲಿದೆ.

ಅಲಹಾಬಾದ್:ಇತ್ತೀಚಿಗೆ ತೆರೆಕಂಡ ಪ್ರಭಾಸ್ ಅಭಿನಯದ 'ಆದಿಪುರುಷ' ಚಿತ್ರದ ವಿರುದ್ಧದ ಅರ್ಜಿಗಳ ವಿಚಾರಣೆ ಅಲಹಾಬಾದ್ ಹೈಕೋರ್ಟ್ ನಲ್ಲಿ ಇಂದು ನಡೆಯಲಿದೆ. ವಿವಿಧ ಅಂಶಗಳಲ್ಲಿ ಈ ಸಿನಿಮಾಕ್ಕೆ ಸಂಬಂಧಿಸಿದ ಆಕ್ಷೇಪಣೆ ಎತ್ತಿ ಅರ್ಜಿದಾರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಲು ಲಕ್ನೋ ಹೈಕೋರ್ಟ್ ಪೀಠ ಸೋಮವಾರ ಅನುಮತಿಸಿತ್ತು.
ಚಿತ್ರದ ಸಂಭಾಷಣೆ, ಬರಹಗಾರ ಮನೋಜ್ ಮುಂತಶಿರ್ ಅವರನ್ನು ಕಕ್ಷಿದಾರರನ್ನಾಗಿ ಮಾಡುವಂತೆ ಸಲ್ಲಿಸಲಾಗಿರುವ ಅರ್ಜಿಯನ್ನು ಪೀಠವು ವಿಚಾರಣೆ ನಡೆಸಲಿದೆ. ಈ ಮಧ್ಯೆ ಜನವರಿ 10 ರಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಪೀಠವು ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ ನೋಟಿಸ್ ನೀಡಿತ್ತು. ಈ ಮಧ್ಯೆ ಸಿನಿಮಾವನ್ನು ನಿಷೇಧಿಸುವಂತೆ ಕೋರಿ ಮತ್ತೊಂದು ಪಿಐಎಲ್ ಸಲ್ಲಿಕೆಯಾಗಿದೆ.
ನವೀನ್ ಧವನ್ ಅವರ ಅರ್ಜಿ ಮಂಗಳವಾರ ವಿಚಾರಣೆಗೆ ಬರಲಿದೆ. ರಾಮಾಯಣ ಮಹಾಕಾವ್ಯ ಆಧಾರಿತ ಆದಿಪುರುಷ ಚಿತ್ರದಲ್ಲಿನ ಸಂಭಾಷಣೆ, ಆಡುಮಾತಿನ ಭಾಷೆ ಮತ್ತು ಕೆಲವು ಪಾತ್ರಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾಗಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


