ಮುಂಬೈನಲ್ಲಿ ಭಾರೀ ಮಳೆ, ಮರ ಬಿದ್ದು ಇಬ್ಬರು ಸಾವು
ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಬುಧವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಮುಂಬೈ: ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಬುಧವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳು ಜಲಾವೃತವಾಗಿದ್ದು, ಅಂಧೇರಿ ಸುರಂಗಮಾರ್ಗವನ್ನು ಬಂದ್ ಮಾಡಲಾಗಿದೆ. ಇದರಿಂದ ಉಪನಗರ ರೈಲು ಸೇವೆ ವಿಳಂಬವಾಗುತ್ತಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಬೃಹನ್ ಮುಂಬೈ ಮಹಾನಗರ ಪಾಲಿಕೆ(BMC)ಯ ವರದಿಯ ಪ್ರಕಾರ, ಉತ್ತರ ಮುಂಬೈನ ಕೆಲವು ಪ್ರದೇಶಗಳಲ್ಲಿ ಇಂದು ಬೆಳಗ್ಗೆ 8 ರಿಂದ ಸಂಜೆ 6ರ ನಡುವೆ 100 ಮಿಮೀ ಗಿಂತ ಹೆಚ್ಚು ಮಳೆಯಾಗಿದೆ.
ಪಕ್ಕದ ಥಾಣೆಯಲ್ಲಿ, ಮಂಗಳವಾರ ಸಂಜೆ ಒಂದು ಅಂತಸ್ತಿನ 'ಚಾಲ್'(ಹಳೆಯ ವಠಾರ)ನ ಒಂದು ಭಾಗ ಕುಸಿದು 36 ವರ್ಷದ ಮಹಿಳೆ ಗಾಯಗೊಂಡಿದ್ದಾರೆ.
ಭಾರತೀಯ ಹವಾಮಾನ ಇಲಾಖೆಯು 'ಆರೆಂಜ್ ಅಲರ್ಟ್' ಘೋಷಿಸಿದ್ದು, ಮಹಾರಾಷ್ಟ್ರದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ ಮತ್ತು ಮುಂಬೈನಲ್ಲಿ ಗುರುವಾರವೂ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


