ರಾಜಸ್ಥಾನ: ಟ್ರಕ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಲಾರಿಗಳು; ಐವರು ಸಜೀವ ದಹನ
ರಾಜಸ್ಥಾನದ ಜೈಪುರ-ಅಜ್ಮೀರ್ ರಸ್ತೆಯಲ್ಲಿ ಬುಧವಾರ ಲಾರಿಯೊಂದು ರಸ್ತೆಬದಿಯಲ್ಲಿ ನಿಂತಿದ್ದ ಎರಡು ಟ್ರಕ್ ಗಳಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಜೀವ ದಹನವಾಗಿದ್ದಾರೆ.

ಜೈಪುರ: ರಾಜಸ್ಥಾನದ ಜೈಪುರ-ಅಜ್ಮೀರ್ ರಸ್ತೆಯಲ್ಲಿ ಬುಧವಾರ ಲಾರಿಯೊಂದು ರಸ್ತೆಬದಿಯಲ್ಲಿ ನಿಂತಿದ್ದ ಎರಡು ಟ್ರಕ್ ಗಳಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಐವರು ಸಜೀವ ದಹನವಾಗಿದ್ದಾರೆ.
ಭೀಕರ ಅಪಘಾತದಲ್ಲಿ ದನಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಸೇರಿದಂತೆ ಎಲ್ಲಾ ಮೂರು ಟ್ರಕ್ಗಳು ಹೊತ್ತಿ ಉರಿದಿದ್ದು, ಹನ್ನೆರಡು ಜಾನುವಾರು ಸಹ ಸಜೀವ ದಹನಗೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೈಪುರ ಗ್ರಾಮಾಂತರದ ದುಡು ಪ್ರದೇಶದಲ್ಲಿ ಇಂದು ಬೆಳಗ್ಗೆ 5.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ.
ಟ್ರಕ್ ಡಿಕ್ಕಿಯ ನಂತರ ಬೆಂಕಿ ಕಾಣಿಸಿಕೊಂಡಿದ್ದು, ಅದು ಎಲ್ಲಾ ಮೂರು ಟ್ರಕ್ಗಳಿಗೂ ಆವರಿಸಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ(ಜೈಪುರ ಗ್ರಾಮಾಂತರ) ದಿನೇಶ್ ಶರ್ಮಾ ತಿಳಿಸಿದ್ದಾರೆ.
ಒಂದು ಟ್ರಕ್ನ ಚಾಲಕ ಸೇರಿದಂತೆ ಐವರು ಸಜೀವ ದಹನವಾಗಿದ್ದಾರೆ ಎಂದು ಇನ್ನೊಬ್ಬ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಮೃತರನ್ನು ಹರ್ಯಾಣದ ಮೂವರು ಪವನ್(28), ಸಂಜು(18), ಧರಮ್ವೀರ್(34) ಮತ್ತು ಬಿಹಾರದ ಛಾಪ್ರಾ ಮೂಲದ ಇಬ್ಬರು - ಜಾನ್ ವಿಜಯ್ (35) ಮತ್ತು ಬಿಜ್ಲಿ (26) ಎಂದು ಗುರುತಿಸಲಾಗಿದೆ.
"ಎರಡು ಟ್ರಕ್ಗಳು ರಸ್ತೆಬದಿಯಲ್ಲಿ ನಿಂತಿದ್ದವು. ಹರಿಯಾಣದಿಂದ ಪುಣೆಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಟ್ರಕ್ ಅವುಗಳಲ್ಲಿ ಒಂದಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ನಿದ್ರೆಯ ಮಂಪರು ಈ ಅಪಘಾತಕ್ಕೆ ಕಾರಣವಾಗಿರಬಹುದು" ಎಂದು ಅಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


