ಜುಲೈ 3ನೇ ವಾರ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ ಸಾಧ್ಯತೆ, ಕಲಾಪ ಮಧ್ಯಭಾಗದಲ್ಲಿ ಹೊಸ ಸಂಸತ್ತು ಭವನಕ್ಕೆ ಶಿಫ್ಟ್
ಸಂಸತ್ತಿನ ಮುಂಗಾರು ಅಧಿವೇಶನ ಜುಲೈ ಮೂರನೇ ವಾರದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ, ಅಧಿವೇಶನಗಳು ಹಳೆಯ ಸಂಸತ್ ಭವನದಲ್ಲಿ ಪ್ರಾರಂಭವಾಗಿ ಮಧ್ಯದಲ್ಲಿ ಹೊಸ ಸಂಸತ್ತು ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿವೆ ಎಂದು ಸಂಸತ್ತಿನ ಮೂಲಗಳು ತಿಳಿಸಿವೆ.

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ(Mansoon session) ಜುಲೈ ಮೂರನೇ ವಾರದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ, ಅಧಿವೇಶನಗಳು ಹಳೆಯ ಸಂಸತ್ ಭವನದಲ್ಲಿ ಪ್ರಾರಂಭವಾಗಿ ಮಧ್ಯದಲ್ಲಿ ಹೊಸ ಸಂಸತ್ತು ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿವೆ ಎಂದು ಸಂಸತ್ತಿನ ಮೂಲಗಳು ತಿಳಿಸಿವೆ.
ಮೇ 28ರಂದು ನೂತನ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ(PM Narendra Modi) ಉದ್ಘಾಟಿಸಿದ್ದರು. ಸುಮಾರು ಒಂದು ತಿಂಗಳ ಅವಧಿಯ ಮುಂಗಾರು ಅಧಿವೇಶನವು 20 ಕಾರ್ಯಕಲಾಪಗಳನ್ನು ನಡೆಸುವ ಸಾಧ್ಯತೆಯಿದೆ. ಸ್ವಾತಂತ್ರ್ಯ ದಿನಾಚರಣೆಯ ಮೊದಲು ಮುಕ್ತಾಯಗೊಳ್ಳಲಿದೆ.
ಹಳೆಯ ಸಂಸತ್ ಭವನದಲ್ಲಿ ಅಧಿವೇಶನ ಆರಂಭವಾಗಲಿದ್ದು, ನಂತರ ಹೊಸ ಸಂಸತ್ತಿಗೆ ತೆರಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯಸಭೆಯ 10 ಸ್ಥಾನಗಳಿಗೆ ಜುಲೈ 24 ರಂದು ಚುನಾವಣೆ
ಅಧಿವೇಶನದ ಸಮಯದಲ್ಲಿ, ಸರ್ಕಾರವು ಸುಪ್ರೀಂ ಕೋರ್ಟ್ ತೀರ್ಪನ್ನು ರದ್ದುಗೊಳಿಸಿದ ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ (ತಿದ್ದುಪಡಿ) ಸುಗ್ರೀವಾಜ್ಞೆಗೆ ಬದಲಾಗಿ ಮಸೂದೆಯನ್ನು ತಂದು ಶೀಘ್ರವಾಗಿ ಅಂಗೀಕರಿಸಲು ಸರ್ಕಾರ ಪ್ರಯತ್ನಿಸಲಿದೆ.
ಕೇಂದ್ರ ಸಚಿವ ಸಂಪುಟ ನಿನ್ನೆ ಅಂಗೀಕರಿಸಿದ ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನ ಮಸೂದೆಯನ್ನೂ ಮುಂಗಾರು ಅಧಿವೇಶನದಲಲಿ ಮಂಡಿಸುವ ಸಾಧ್ಯತೆ ಇದೆ. ಪ್ರಸ್ತಾವಿತ ಪ್ರತಿಷ್ಠಾನವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ದೇಶದ ಸಂಶೋಧನಾ ಸಾಮರ್ಥ್ಯವನ್ನು ಹೆಚ್ಚಿಸಲು ಹೊಸ ನಿಧಿ ಸಂಸ್ಥೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


