ಉತ್ತರ ಪ್ರದೇಶ: ಪತ್ನಿಗೆ ಗುಂಡಿಕ್ಕಿ ತಾನೂ ಆತ್ಮಹತ್ಯೆಗೆ ಶರಣಾದ ವ್ಯಕ್ತಿ; ನವದಂಪತಿಗಳ ದುರಂತ ಅಂತ್ಯ!
ನವವಿವಾಹಿತ ವ್ಯಕ್ತಿಯೋರ್ವ ಪತ್ನಿಗೆ ಗುಂಡಿಕ್ಕಿ ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ನಡೆದಿದೆ.

ಮುಜಾಫರ್ ನಗರ: ನವವಿವಾಹಿತ ವ್ಯಕ್ತಿಯೋರ್ವ ಪತ್ನಿಗೆ ಗುಂಡಿಕ್ಕಿ ಸಾಯಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ನಡೆದಿದೆ.
ಮಖ್ಯಾಲಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಪತ್ನಿಯೊಂದಿಗೆ ಜಗಳವಾಡಿದ ನಂತರ ಆಕೆಯ ಮೇಲೆ ಗುಂಡಿನ ದಾಳಿ ನಡೆಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಜಗಳ ಬಿಡಿಸಲು ಹೋದ ಮತ್ತೋರ್ವ ವ್ಯಕ್ತಿಗೂ ಸಹ ಗುಂಡೇಟು ತಗುಲಿದ್ದು, ಗಾಯಗೊಂಡಿದ್ದಾರೆ. ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಿಂದ 2 ಪಿಸ್ತೋಲ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ನಸೀಮ್ ಮಲಿಕ್ ಐದು ತಿಂಗಳ ಹಿಂದೆ ಮಧ್ಯವರ್ತಿ ಸದ್ದಾಂ ಸಹಾಯದಿಂದ 25 ವರ್ಷದ ನರ್ಗೀಸ್ ಅವರನ್ನು ವಿವಾಹವಾಗಿದ್ದರು. ಶುಕ್ರವಾರ, ನಸೀಮ್ ಮತ್ತು ನರ್ಗೀಸ್ ಜಗಳವಾಡಿದ್ದರು, ಮಧ್ಯಸ್ಥಿಕೆಯನ್ನು ಪಡೆಯಲು ಇಬ್ಬರೂ ಸದ್ದಾಂ ಎಂಬಾತನ ಮೊರೆ ಹೋದರು ಆದರೆ ಅವನು ಓಡಿಹೋದ. ಸದ್ದಾಂ ನ ಮನೆಯಲ್ಲಿ ಜಗಳವಾಡುತ್ತಿದ್ದಾಗ ನೆರೆಮನೆಯವನಾದ ಸಬೀರ್ ಎಂಬಾತ ಜಗಳ ಬಿಡಿಸಲು ಹೋಗಿದ್ದ ಆತನ ಮೇಲೆಯೂ ನಸೀಮ್ ದಾಳಿ ಮಾಡಿದ್ದ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


