ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವಧಿ ಮತ್ತೆ ಮೂರು ವರ್ಷ ವಿಸ್ತರಣೆ
ಹಿರಿಯ ವಕೀಲ ತುಷಾರ್ ಮೆಹ್ತಾ ಅವರನ್ನು ಶುಕ್ರವಾರ ಮೂರು ವರ್ಷಗಳ ಅವಧಿಗೆ ಭಾರತದ ಸಾಲಿಸಿಟರ್ ಜನರಲ್ ಆಗಿ ಮರು ನೇಮಕ ಮಾಡಲಾಗಿದೆ.

ನವದೆಹಲಿ: ಹಿರಿಯ ವಕೀಲ ತುಷಾರ್ ಮೆಹ್ತಾ ಅವರನ್ನು ಶುಕ್ರವಾರ ಮೂರು ವರ್ಷಗಳ ಅವಧಿಗೆ ಭಾರತದ ಸಾಲಿಸಿಟರ್ ಜನರಲ್ ಆಗಿ ಮರು ನೇಮಕ ಮಾಡಲಾಗಿದೆ.
ಮೆಹ್ತಾ ಅವರನ್ನು ಅಕ್ಟೋಬರ್ 10, 2018 ರಂದು ಸಾಲಿಸಿಟರ್ ಜನರಲ್ ಆಗಿ ನೇಮಿಸಲಾಯಿತು ಮತ್ತು ಅಂದಿನಿಂದ ಅವರ ಅವಧಿಯನ್ನು ಎರಡು ಬಾರಿ ವಿಸ್ತರಣೆ ಮಾಡಲಾಗಿದೆ.
ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶದ ಪ್ರಕಾರ, ಮೆಹ್ತಾ ಅಲ್ಲದೆ, ಸುಪ್ರೀಂ ಕೋರ್ಟ್‌ಗೆ ಆರು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳನ್ನು ಮೂರು ವರ್ಷಗಳ ಅವಧಿಗೆ ಮರುನೇಮಕ ಮಾಡಲಾಗಿದೆ.
ವಿಕ್ರಮಜಿತ್ ಬ್ಯಾನರ್ಜಿ, ಕೆ ಎಂ ನಟರಾಜ್, ಬಲ್ಬೀರ್ ಸಿಂಗ್, ಎಸ್ ವಿ ರಾಜು, ಎನ್ ವೆಂಕಟರಾಮನ್ ಮತ್ತು ಐಶ್ವರ್ಯ ಭಾಟಿ ಅವರು ಸುಪ್ರೀಂ ಕೋರ್ಟ್‌ಗೆ ಮರು ನೇಮಕಗೊಂಡ ಆರು ಹೆಚ್ಚುವರಿ ಸಾಲಿಸಿಟರ್ ಜನರಲ್‌ಗಳಾಗಿದ್ದಾರೆ.
ಹೆಚ್ಚುವರಿ ಸಾಲಿಸಿಟರ್ ಜನರಲ್ ಮಾಧವಿ ಗೊರಾಡಿಯಾ ದಿವಾನ್ ಮತ್ತು ಸಂಜಯ್ ಜೈನ್ ಅವರ ಅಧಿಕಾರಾವಧಿ ಶುಕ್ರವಾರ ಕೊನೆಗೊಂಡಿದ್ದು, ಈ ಇಬ್ಬರು ಮರು ನೇಮಕಗೊಂಡ ಕಾನೂನು ಅಧಿಕಾರಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.
ಹೆಚ್ಚುವರಿ ಸಾಲಿಸಿಟರ್ ಜನರಲ್ ಜಯಂತ್ ಕೆ ಸುದ್ ಅವರ ಅಧಿಕಾರಾವಧಿ ಗುರುವಾರ ಕೊನೆಗೊಂಡಿದ್ದು, ಅವರೂ ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


