ದೇಶ

ಉತ್ತರ ಪ್ರದೇಶ: ಭೀಕರ ಅಪಘಾತ; ಕಾರು-ಲಾರಿ ನಡುವೆ ಡಿಕ್ಕಿ, 6 ಮಂದಿ ದುರ್ಮರಣ

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 6 ಮಂದಿ ದುರ್ಮರಣ ಹೊಂದಿದ್ದಾರೆ.

ಉತ್ತರ ಪ್ರದೇಶ: ಭೀಕರ ಅಪಘಾತ; ಕಾರು-ಲಾರಿ ನಡುವೆ ಡಿಕ್ಕಿ, 6 ಮಂದಿ ದುರ್ಮರಣ
ಅಪಘಾತದ ಚಿತ್ರ
Published On :

ಬಾಂಡ: ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 6 ಮಂದಿ ದುರ್ಮರಣ ಹೊಂದಿದ್ದಾರೆ. ಬಾಂಡ ಪ್ರದೇಶದಲ್ಲಿ ತಡರಾತ್ರಿ ನಡೆದಿರುವ ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಬಾಂಡಾ ಡಿಎಂ ದುರ್ಗಾ ಶಕ್ತಿ ನಾಗಪಾಲ್ ತಿಳಿಸಿದ್ದಾರೆ.

ಕಾರಿನ ಅತಿ ವೇಗವೇ ಅಪಘಾತಕ್ಕೆ ಕಾರಣವಾಗಿದೆ. ಕಾರಿನಲ್ಲಿದ್ದ 8 ಮಂದಿಯ ಪೈಕಿ ಆರು ಮಂದಿ ಸಾವನ್ನಪ್ಪಿದ್ದು, ಉಳಿದ ಇಬ್ಬರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.