ದೇಶ

ಮುಂಬೈ ಲೋಕಲ್ ರೈಲಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ

ವಾಣಿಜ್ಯ ನಗರಿ ಮುಂಬೈನ ಸ್ಥಳೀಯ ರೈಲಿನಲ್ಲಿ 24 ವರ್ಷದ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 23 ರ ರಾತ್ರಿ ಪಶ್ಚಿಮ ರೈಲ್ವೆಯ ಚಾರ್ನಿ ರಸ್ತೆ ಮತ್ತು ಗ್ರಾಂಟ್ ರಸ್ತೆ ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ.

ಮುಂಬೈ ಲೋಕಲ್ ರೈಲಿನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ
ರೈಲಿನಲ್ಲಿ ಮಹಿಳೆಗೆ ಕಿರುಕುಳ ಪ್ರಕರಣದ ಸಾಂದರ್ಭಿಕ ಚಿತ್ರ
Published On :

ಮುಂಬೈ: ವಾಣಿಜ್ಯ ನಗರಿ ಮುಂಬೈನ  ಸ್ಥಳೀಯ ರೈಲಿನಲ್ಲಿ 24 ವರ್ಷದ ಮಹಿಳೆಗೆ ಅಪರಿಚಿತ ವ್ಯಕ್ತಿಯೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 23 ರ ರಾತ್ರಿ ಪಶ್ಚಿಮ ರೈಲ್ವೆಯ ಚಾರ್ನಿ ರಸ್ತೆ ಮತ್ತು ಗ್ರಾಂಟ್ ರಸ್ತೆ ನಿಲ್ದಾಣಗಳ ನಡುವೆ ಈ ಘಟನೆ ನಡೆದಿದೆ. 

ಐದು ದಿನಗಳ ನಂತರ ಮಹಿಳೆ ಬುಧವಾರ ರೈಲ್ವೇ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.ಈ ಸಂಬಂಧ ಮುಂಬೈ ಸೆಂಟ್ರಲ್ ರೈಲ್ವೇ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 354-ಎ (ಲೈಂಗಿಕ ಕಿರುಕುಳ) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ.

ಮಹಿಳೆ ಚಾರ್ನಿ ರಸ್ತೆ ನಿಲ್ದಾಣದಲ್ಲಿ ಚರ್ಚ್‌ಗೇಟ್‌ಗೆ ಹೋಗುವ ರೈಲು ಹತ್ತಿದ್ದಾಳೆ. ಇದು ಗ್ರಾಂಟ್ ರೋಡ್ ನಿಲ್ದಾಣ ಸಮೀಪಿಸುತ್ತಿದ್ದಂತೆ, ಆ ವ್ಯಕ್ತಿ ಅಶ್ಲೀಲ ಸನ್ನೆ ಮಾಡಿದ್ದು, ಅಶ್ಲೀಲ ಭಾಷೆಯನ್ನು ಬಳಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. 

ಪೊಲೀಸರು ಶಂಕಿತನನ್ನು ಗುರುತಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದೇ ತಿಂಗಳ ಆರಂಭದಲ್ಲಿ 20 ವರ್ಷದ ಮಹಿಳೆಯೊಬ್ಬರಿಗೆ ಮುಂಬೈ ಲೋಕಲ್ ರೈಲಿನ ಮಹಿಳಾ ಕಂಪಾರ್ಟ್‌ಮೆಂಟ್‌ನಲ್ಲಿ ವ್ಯಕ್ತಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದರು. ನಂತರ ಪೊಲೀಸರು ಅಪರಾಧಕ್ಕಾಗಿ 40 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.