ಸೇನೆಯಿಂದ ಚೀನಾ, ಪಾಕ್ ಗಡಿ ಭಾಗಗಳಿಗೆ 307 ಹೊವಿಟ್ಜರ್ ಗಳ ಖರೀದಿ
ರಕ್ಷಣಾ ಕ್ಷೇತ್ರದಲ್ಲಿ ಮೇಕ್ ಇನ್ ಇಂಡಿಯಾದತ್ತ ದೃಢವಾದ ಹೆಜ್ಜೆ ಇರಿಸಲು ಚೀನಾ, ಪಾಕಿಸ್ತಾನ ಗಡಿಗಳಿಗೆ ನಿಯೋಜಿಸಲು ರಕ್ಷಣಾ ಸಚಿವಾಲಯ ಭಾರತೀಯ ಸೇನೆಯಿಂದ 307 ಅತ್ಯಾಧುನಿಕ ಟೋವ್ಡ್ ಆರ್ಟಿಲರಿ ಗನ್ ಸಿಸ್ಟಮ್ಸ್ ಗಳ ಖರೀದಿಗೆ ಪ್ರಸ್ತಾವನೆ ಬಂದಿದೆ

ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಮೇಕ್ ಇನ್ ಇಂಡಿಯಾದತ್ತ ದೃಢವಾದ ಹೆಜ್ಜೆ ಇರಿಸಲು ಚೀನಾ, ಪಾಕಿಸ್ತಾನ ಗಡಿಗಳಿಗೆ ನಿಯೋಜಿಸಲು ರಕ್ಷಣಾ ಸಚಿವಾಲಯ ಭಾರತೀಯ ಸೇನೆಯಿಂದ 307 ಅತ್ಯಾಧುನಿಕ ಟೋವ್ಡ್ ಆರ್ಟಿಲರಿ ಗನ್ ಸಿಸ್ಟಮ್ಸ್ ಗಳ ಖರೀದಿಗೆ ಪ್ರಸ್ತಾವನೆ ಬಂದಿದೆ.
ಈ ಪ್ರಸ್ತಾವನೆ 1 ಬಿಲಿಯನ್ ಡಾಲರ್ ಮೌಲ್ಯದ್ದಾಗಿದ್ದು, ಸಂಪುಟ ಸಮಿತಿ ಅನುಮೋದನೆಗೆ ಕಳಿಸಲಾಗಿದೆ. ಇದು ದೇಶಿಯವಾಗಿ ತಯಾರಾಗಲಿರುವ ಹೊವಿಟ್ಜರ್ ಗಳ ಮೊದಲ ಖರೀದಿಯಾಗಿರಲಿದ್ದು, 50 ಕೀ.ಮೀ ವ್ಯಾಪ್ತಿ ವರೆಗಿನ ಟಾರ್ಗೆಟ್ ಗಳನ್ನು ತಲುಪುವ ಸಾಮರ್ಥ್ಯವನ್ನು ಹೊಂದಿರಲಿದೆ.
ಈ ಗನ್ ಗಳ ಪರೀಕ್ಷಾರ್ಥ ಪ್ರಯೋಗವನ್ನು ಸೇನಾಪಡೆಗಳು ಈಗಾಗಲೇ ಮುಕ್ತಾಯಗೊಳಿಸಿವೆ. ಬಳಕೆದಾರರ ಸಲಹೆ-ಸೂಚನೆಗಳನ್ನಾಧರಿಸಿ ಈ ಗನ್ ಗಳನ್ನು ಮೇಲ್ದರ್ಜೆಗೇರಿಸಲಾಗಿದೆ.
ಹೊವಿಟ್ಜರ್‌ನ ತಂತ್ರಜ್ಞಾನವನ್ನು ಎರಡು ಖಾಸಗಿ ಸಂಸ್ಥೆಗಳಾದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಮತ್ತು ಭಾರತ್ ಫೋರ್ಜ್ ಗ್ರೂಪ್‌ನೊಂದಿಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹಂಚಿಕೊಂಡಿದೆ ಮತ್ತು ಈ ಸಂಸ್ಥೆಗಳು 320 ಕ್ಕೂ ಹೆಚ್ಚು ಹೈ ಮೊಬಿಲಿಟಿ ವಾಹನಗಳು ಸೇರಿದಂತೆ ಪಡೆಗಳಿಗೆ ವ್ಯವಸ್ಥೆಯನ್ನು ಪೂರೈಸುತ್ತವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


