ಗಡ್ಡ ಮೀಸೆ ಟ್ರಿಮ್ ಮಾಡಿಸಿಕೊಂಡು ಹೊಸ ಲುಕ್ನೊಂದಿಗೆ ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್ ಗಾಂಧಿ ಉಪನ್ಯಾಸ!
ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ಬುಧವಾರ ಬ್ರಿಟನ್‌ಗೆ ತೆರಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ಬುಧವಾರ ಬ್ರಿಟನ್‌ಗೆ ತೆರಳಿದ್ದಾರೆ. ರಾಹುಲ್ ಗಾಂಧಿ ಬ್ರಿಟನ್‌ಗೆ ತೆರಳುವ ಮುನ್ನ ತಮ್ಮ ಲುಕ್ನಲ್ಲಿ ಬದಲಾವಣೆ ಮಾಡಿಕೊಂಡಿದ್ದು, ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಪ್ರಸಿದ್ಧಿ ಪಡೆದುಕೊಂಡಿದ್ದ ತಮ್ಮ ಗಡ್ಡವನ್ನು ಟ್ರಿಮ್ ಮಾಡಿಕೊಂಡಿದ್ದಾರೆ.
ಉಪನ್ಯಾಸ ನೀಡಲು ತೆರಳುತ್ತಿದ್ದಂತೆ ರಾಹುಲ್ ಗಾಂಧಿ ಲುಕ್ ಬದಲಾಗಿದೆ. ಟೀ-ಶರ್ಟ್ ಕಳಚಿಟ್ಟು ಕೋಟು, ಟೈ ಧರಿಸಿ ಮಿಂಚುತ್ತಿದ್ದಾರೆ. ರಾಹುಲ್ ಗಾಂಧಿ ಭಾರತ್ ಜೋಡೊ ಯಾತ್ರೆ ಕೊನೆಗೊಳ್ಳುವವರೆಗೆ ತಮ್ಮ ಗಡ್ಡ ಟ್ರಿಮ್ ಮಾಡಿಸಿಕೊಂಡಿರಲಿಲ್ಲ. ಈ ಲುಕ್ ಸಾಕಷ್ಟು ಪ್ರಸಿದ್ಧಿ ಪಡೆದುಕೊಂಡಿತ್ತು ಮತ್ತು ಟ್ರೋಲ್ಗೂ ಒಳಗಾಗಿತ್ತು.
ಇದೀಗ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ತೆಳಿರುವ ರಾಹುಲ್, ತಮ್ಮ ಕೂದಲು ಹಾಗೂ ಗಡ್ಡಕ್ಕೆ ಕತ್ತರಿ ಪ್ರಯೋಗ ಮಾಡಿದ್ದಾರೆ. ಸದ್ಯ ರಾಹುಲ್ ಗಾಂಧಿಯ ಹೊಸ ಲುಕ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಒಂದು ವಾರದ ಮಟ್ಟಿಗೆ ಬ್ರಿಟನ್ ಪ್ರವಾಸದಲ್ಲಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ರಾಹುಲ್ ಗಾಂಧಿ ಉಪನ್ಯಾಸ ನೀಡಲಿದ್ದಾರೆ. ರಾಹುಲ್ ಗಾಂಧಿ ಭಾರತೀಯ ವಲಸಿಗ ಸಮುದಾಯದೊಂದಿಗೆ ಸಂವಾದ ನಡೆಸಲಿದ್ದಾರೆ. ಕೇಂಬ್ರಿಡ್ಜ್ ಜಡ್ಜ್ ಬ್ಯುಸಿನೆಸ್ ಸ್ಕೂಲ್ ನಲ್ಲಿ ರಾಹುಲ್ ಗಾಂಧಿ '21 ನೇ ಶತಮಾನದಲ್ಲಿ ಕೇಳುವುದು ಮತ್ತು ಕಲಿಯುವುದು' ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


