2024 ರ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಸ್ವತಂತ್ರವಾಗಿ ಸ್ಪರ್ಧೆ: ಮಮತಾ ಬ್ಯಾನರ್ಜಿ
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ವಿಪಕ್ಷಗಳ ಮಹಾ ಮೈತ್ರಿಕೂಟ ಹಾಗೂ ತೃತೀಯ ರಂಗ ರಚನೆಯ ಮಾತುಗಳು ಕೇಳಿಬರುತ್ತಿವೆ.

ಕೊಲ್ಕತ್ತಾ: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೇತರ ವಿಪಕ್ಷಗಳ ಮಹಾ ಮೈತ್ರಿಕೂಟ ಹಾಗೂ ತೃತೀಯ ರಂಗ ರಚನೆಯ ಮಾತುಗಳು ಕೇಳಿಬರುತ್ತಿವೆ.
ಸಮಾನ ಮನಸ್ಕ ಜಾತ್ಯತೀತ ಶಕ್ತಿಗಳನ್ನು ಗುರುತಿಸಲು, ಸಜ್ಜುಗೊಳಿಸಲು ಮತ್ತು ಒಗ್ಗೂಡಿಸಲು ಹಾಗೂ ತನ್ನ ಸಿದ್ಧಾಂತವನ್ನು ಒಪ್ಪುವ ಜಾತ್ಯತೀತ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದ್ದರೆ, ಬಿಜೆಪಿ ಹಾಗೂ ಕಾಂಗ್ರೆಸ್ ಹೊರತಾದ ತೃತೀಯ ರಂಗ ರಚನೆಗೆ ಕೆಲವು ಪ್ರಾದೇಶಿಕ ಪಕ್ಷಗಳು ಪ್ರಯತ್ನ ಪಡುತ್ತಿವೆ.
ಈ ನಡುವೆ 2024ರ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪಕ್ಷದೆ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಲ್ಪಸಂಖ್ಯಾತರಾಗಲಿ ಅಥವಾ ಬಹುಸಂಖ್ಯಾತರಾಗಲಿ ಎಲ್ಲರೂ ನಮ್ಮೊಂದಿಗೆ ಇದ್ದಾರೆ. ಎಲ್ಲರೂ ನಮಗೆ ಸಮಾನರು ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಗಾಗಿ ಪ್ರತಿಪಕ್ಷಗಳ ಒಗ್ಗಟ್ಟಿಗಾಗಿ ಪ್ರಯತ್ನ ನಡೆಯುತ್ತಿದೆ.ವಾಸ್ತವವಾಗಿ, ಬ್ಯಾನರ್ಜಿ ಅವರು 2019 ರ ಚುನಾವಣೆಯ ಸಮಯದಲ್ಲಿ ವಿಪಕ್ಷಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಮುಂಚೂಣಿಯಲ್ಲಿದ್ದರು. ಆದರೆ ಅವರ ಪ್ರಯತ್ನ ಫಲ ನೀಡಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


