ಮಾರ್ಚ್ 17ರವರೆಗೆ ಪವನ್ ಖೇರಾ ಮಧ್ಯಂತರ ಜಾಮೀನು ವಿಸ್ತರಿಸಿದ ಸುಪ್ರೀಂ ಕೋರ್ಟ್
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಮಾರ್ಚ್ 17ರವರೆಗೂ ಸುಪ್ರೀಂ ಕೋರ್ಟ್ ವಿಸ್ತರಿಸಿದೆ. ಈ ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ಪವನ್ ಖೇರಾ ಅವರನ್ನು ಬಂಧಿಸಿದ್ದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ನೀಡಲಾಗಿದ್ದ ಮಧ್ಯಂತರ ಜಾಮೀನನ್ನು ಮಾರ್ಚ್ 17ರವರೆಗೂ ಸುಪ್ರೀಂ ಕೋರ್ಟ್ ವಿಸ್ತರಿಸಿದೆ. ಈ ಪ್ರಕರಣದಲ್ಲಿ ಅಸ್ಸಾಂ ಪೊಲೀಸರು ಪವನ್ ಖೇರಾ ಅವರನ್ನು ಬಂಧಿಸಿದ್ದರು.
ಸಮಯ ಮೀರಿದ್ದರಿಂದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಜೆಬಿ ಪಾರ್ದಿವಾಲಾ ಅವರನ್ನೊಳಗೊಂಡ ನ್ಯಾಯಪೀಠ, ವಿಚಾರಣೆಯನ್ನು ಮಾರ್ಚ್ 17ಕ್ಕೆ ಮುಂದೂಡಿತು.
ಉತ್ತರ ಪ್ರದೇಶ ಮತ್ತು ಅಸ್ಸಾಂನ ಪ್ರತಿಕ್ರಿಯೆ ದಾಖಲಿಸಿಲ್ಲ ಎಂಬುದನ್ನು ಪರಿಗಣಿಸಿದ ನ್ಯಾಯಪೀಠ, ಹೋಳಿ ರಜೆ ನಂತರ ಅರ್ಜಿ ವಿಚಾರಣೆ ನಡೆಸುವುದಾಗಿ ಹೇಳಿತು. ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಅಸ್ಸಾಂ ಮತ್ತು ಉತ್ತರ ಪ್ರದೇಶದಲ್ಲಿ ಪವನ್ ಖೇರಾ ವಿರುದ್ಧ ಐಪಿಸಿ ಸೆಕ್ಷನ್ 153 ಎ, 500, 504, 505 (2) ಸೆಕ್ಷನ್ ಅಡಿಯಲ್ಲಿ ಹಲವು ಎಫ್ ಐಆರ್ ದಾಖಲಾಗಿವೆ.
ಈ ಹಿಂದೆ ಫೆಬ್ರವರಿ 27 ರಂದು ಸುಪ್ರೀಂಕೋರ್ಟ್ ಪವನ್ ಖೇರಾ ಅವರ ಮಧ್ಯಂತರ ಜಾಮೀನು ಅವಧಿಯನ್ನು ಇಂದಿನವರೆಗೂ ವಿಸ್ತರಿಸಿತ್ತು. ಖೇರಾ ಅವರನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು. ತದನಂತರ ಮ್ಯಾಜಿಸ್ಟ್ರೇಟ್ ಕೋರ್ಟ್ ನಿಂದ ಜಾಮೀನು ಸಿಕ್ಕಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


