ಜಮ್ಮು-ಕಾಶ್ಮೀರ: ರಸ್ತೆ ನಿರ್ಮಾಣದ ವೇಳೆ 6 ಗ್ರೆನೇಡ್, ಮದ್ದುಗುಂಡುಗಳು ಪತ್ತೆ
ಜಮ್ಮು-ಕಾಶ್ಮೀರದ ರಜೌರಿಯಲ್ಲಿ ರಸ್ತೆ ನಿರ್ಮಾಣದ ವೇಳೆ 6 ಹ್ಯಾಂಡ್ ಗ್ರೆನೇಡ್ ಗಳನ್ನು ವಶಕ್ಕೆ ಪಡೆದಿದ್ದು 127 ರೌಂಡ್ ಗಳ ಸಾಮಾನ್ಯ ಬಳಕೆಯ ಮಷಿನ್ ಗನ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ಶ್ರೀನಗರ: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ರಸ್ತೆ ನಿರ್ಮಾಣದ ವೇಳೆ 6 ಹ್ಯಾಂಡ್ ಗ್ರೆನೇಡ್ ಗಳನ್ನು ವಶಕ್ಕೆ ಪಡೆದಿದ್ದು 127 ರೌಂಡ್ ಗಳ ಸಾಮಾನ್ಯ ಬಳಕೆಯ ಮಷಿನ್ ಗನ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಗ್ರೆನೇಡ್ ಗಳು ಹಾಗೂ ಶಸ್ತ್ರಾಸ್ತ್ರಗಳನ್ನು ಮಣ್ಣಲ್ಲಿ ಹೂಳಲಾಗಿತ್ತು. ಮಂಜಕೋಟೆ ತಹಸಿಲ್ ನೈಲಿ ಗ್ರಾಮದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿದ್ದಾಗ ಶಸ್ತ್ರಾಸ್ತ್ರಗಳನ್ನು ಕಾರ್ಮಿಕರು ಪತ್ತೆ ಮಾಡಿದ್ದಾರೆ.
ಉಪವಿಭಾಗೀಯ ಪೊಲೀಸ್ ಅಧಿಕಾರಿ ಝಾಫರ್ ಈ ಬಗ್ಗೆ ಮಾತನಾಡಿದ್ದು, ಗ್ರೆನೇಡ್ ಗಳು ತುಕ್ಕು ಹಿಡಿದ ಸ್ಥಿತಿಯಲ್ಲಿವೆ ಬಹುಶಃ ಇದು ಬಹಳ ಹಿಂದೆ ಇಡಲಾಗಿತ್ತು ಎಂದು ಹೇಳಿದ್ದಾರೆ.
ತಕ್ಷಣವೇ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


