ದೇಶ

ಜಿನೀವಾದಲ್ಲಿ ಭಾರತ ವಿರೋಧಿ ಪೋಸ್ಟರ್: ಸ್ವಿಸ್ ರಾಯಭಾರಿಗೆ ಭಾರತ ಸಮನ್ಸ್

ಜಿನೀವಾದಲ್ಲಿನ ವಿಶ್ವಸಂಸ್ಥೆಯ ಕಟ್ಟಡದಲ್ಲಿ ದುರುದ್ದೇಶಪೂರಿತ ಭಾರತ ವಿರೋಧಿ ಬರಹ ಪತ್ತೆಯಾಗಿದ್ದು, ಈ ವಿಚಾರವಾಗಿ ಸ್ವಿಸ್ ರಾಯಭಾರಿಗೆ ಭಾರತ ಸಮನ್ಸ್ ನೀಡಿದೆ.

ಜಿನೀವಾದಲ್ಲಿ ಭಾರತ ವಿರೋಧಿ ಪೋಸ್ಟರ್: ಸ್ವಿಸ್ ರಾಯಭಾರಿಗೆ ಭಾರತ ಸಮನ್ಸ್
ಜಿನೀವಾದಲ್ಲಿ ಭಾರತ ವಿರೋಧಿ ಪೋಸ್ಟರ್
Published On :

ಜಿನೀವಾ: ಜಿನೀವಾದಲ್ಲಿನ ವಿಶ್ವಸಂಸ್ಥೆಯ ಕಟ್ಟಡದಲ್ಲಿ ದುರುದ್ದೇಶಪೂರಿತ ಭಾರತ ವಿರೋಧಿ ಬರಹ ಪತ್ತೆಯಾಗಿದ್ದು, ಈ ವಿಚಾರವಾಗಿ ಸ್ವಿಸ್ ರಾಯಭಾರಿಗೆ ಭಾರತ ಸಮನ್ಸ್ ನೀಡಿದೆ.

ಘಟನೆಯನ್ನು ಪ್ರತಿಭಟಿಸಿರುವ ಭಾರತದ ವಿದೇಶಾಂಗ ಸಚಿವಾಲಯಕ್ಕೆ ಸ್ವಿಸ್ ರಾಯಭಾರಿ, ಭಾರತದ ವಿರೋಧವನ್ನು ಬರ್ನ್‌ಗೆ ಮನವರಿಕೆ ಮಾಡುವುದಾಗಿ ಹೇಳಿದ್ದಾರೆ. 

ವಿದೇಶಾಂಗ ಇಲಾಖೆಯ ಕಾರ್ಯದರ್ಶಿ ಇಂದು ಸ್ವಿಸ್ ರಾಯಭಾರಿಯನ್ನು ಭೇಟಿ ಮಾಡಿ ವಿಶ್ವಸಂಸ್ಥೆ ಕಟ್ಟಡದಲ್ಲಿ ಕಂಡುಬಂದಂತಹ ಭಾರತ ವಿರೋಧಿ ಬರಹದ ಬಗ್ಗೆ ಪ್ರತಿಭಟನೆಯನ್ನು ದಾಖಲಿಸಿದರು ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಪ್ರತಿಭಟನೆಗೆ ಎಲ್ಲರಿಗೂ ಅವಕಾಶ ಇದೆ ಆದರೂ ಈ ರೀತಿಯ ಪ್ರತಿಭಟನೆಗಳು ಸ್ವಿಸ್ ಸರ್ಕಾರದ ನಿಲುವುಗಳನ್ನು ಪ್ರತಿನಿಧಿಸುವುದಿಲ್ಲ ಎಂದು ಅಲ್ಲಿನ ಸರ್ಕಾರ ಸ್ಪಷ್ಟನೆ ನೀಡಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.