ತಮಿಳುನಾಡು: ಬಿಜೆಪಿ ತೊರೆದು ಎಐಎಡಿಎಂಕೆ ಸೇರಿದ 13 ಮುಖಂಡರು
ಭಾರತೀಯ ಜನತಾ ಪಕ್ಷದ ತಮಿಳುನಾಡು ಘಟಕದ ಒಟ್ಟು 13 ಪದಾಧಿಕಾರಿಗಳು ಬುಧವಾರ ಕೇಸರಿ ಪಕ್ಷ ತೊರೆದು ಮಿತ್ರ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಸೇರಿದ್ದಾರೆ.

ಚೆನ್ನೈ: ಭಾರತೀಯ ಜನತಾ ಪಕ್ಷದ ತಮಿಳುನಾಡು ಘಟಕದ ಒಟ್ಟು 13 ಪದಾಧಿಕಾರಿಗಳು ಬುಧವಾರ ಕೇಸರಿ ಪಕ್ಷ ತೊರೆದು ಮಿತ್ರ ಪಕ್ಷ ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ(ಎಐಎಡಿಎಂಕೆ) ಸೇರಿದ್ದಾರೆ.
ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ನಮ್ಮ ಪಕ್ಷದ ನಾಯಕರನ್ನು ಖರೀದಿ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕ ಆರೋಪಿಸಿದ ಬೆನ್ನಲ್ಲೇ ಬಿಜೆಪಿಯ ಐಟಿ ವಿಭಾಗಕ್ಕೆ ಸೇರಿದ 13 ಮುಖಂಡರು ಎಐಎಡಿಎಂಕೆ ಸೇರಿದ್ದಾರೆ.
ವರ್ಷಗಳಿಂದ ಬಿಜೆಪಿಗಾಗಿ ದುಡಿದಿದ್ದೇನೆ. ನಾನು ಯಾವುದೇ ಸ್ಥಾನಮಾನ ನಿರೀಕ್ಷೆ ಮಾಡಿಲ್ಲ ಎಂಬುದು ಜನರಿಗೆ ಗೊತ್ತಿದೆ. ಆದರೆ ಕಳೆದ ಕೆಲವು ದಿನಗಳಿಂದ ಪಕ್ಷದಲ್ಲಿನ ಘಟನೆಗಳನ್ನು ಪರಿಗಣಿಸಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಬಿಜೆಪಿ ಐಟಿ ವಿಭಾಗದ ಜಿಲ್ಲಾಧ್ಯಕ್ಷ ಓರತಿ ಅನ್ಬರಸು ಅವರು ಹೇಳಿದ್ದಾರೆ.
"ನಮ್ಮ ನಾಯಕ ಮತ್ತು ಮಾಜಿ ಬಿಜೆಪಿ ರಾಜ್ಯ ಐಟಿ ವಿಂಗ್ ಮುಖ್ಯಸ್ಥ ಸಿಟಿಆರ್ ನಿರ್ಮಲ್ ಕುಮಾರ್ ಅವರು ತೋರಿಸಿದ ಮಾರ್ಗವನ್ನು ನಾವು ಅನುಸರಿಸಲು ನಿರ್ಧರಿಸಿದ್ದೇವೆ" ಎಂದು ಅನ್ಬರಸು ತಿಳಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರ ಕಾರ್ಯನಿರ್ವಹಣೆ ಶೈಲಿ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡಿದ ಹಿನ್ನೆಲೆಯಲ್ಲಿ ಪಕ್ಷದ ಐಟಿ ವಿಭಾಗದ ಮುಖ್ಯಸ್ಥರಾಗಿದ್ದ ಸಿಟಿ ಆರ್ ನಿರ್ಮಲ್ ಕುಮಾರ್ ಅವರು ಕೇಸರಿ ಪಕ್ಷಕ್ಕೆ ರಾಜೀನಾಮೆ ನೀಡಿ ಎಐಎಡಿಎಂಕೆ ಸೇರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


