ದೆಹಲಿ ಅಬಕಾರಿ ನೀತಿ ಹಗರಣ: ಮತ್ತೆ ಸಿಸೋಡಿಯಾ ವಿಚಾರಣೆಗೆ ತಿಹಾರ್ ಜೈಲಿಗೆ ಇ.ಡಿ ತಂಡ ಭೇಟಿ
ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಮತ್ತೊಮ್ಮೆ ಪ್ರಶ್ನಿಸಲು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ತಿಹಾರ್ ಜೈಲಿಗೆ ತಲುಪಿದ್ದಾರೆ.

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಮತ್ತೊಮ್ಮೆ ಪ್ರಶ್ನಿಸಲು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ತಿಹಾರ್ ಜೈಲಿಗೆ ತಲುಪಿದ್ದಾರೆ.
ತನಿಖಾ ಸಂಸ್ಥೆಯ ಮೂಲಗಳ ಪ್ರಕಾರ, ಸಿಸೋಡಿಯಾ ಅವರನ್ನು ಮೂರು ದಿನಗಳ ಕಾಲ ವಿಚಾರಣೆಗೊಳಪಡಿಸಲು ಅವರಿಗೆ ಅನುಮತಿ ಇದೆ ಎನ್ನಲಾಗಿದೆ.
ಇದಕ್ಕೂ ಮೊದಲು, ಸೌತ್ ಗ್ರೂಪ್‌ನಿಂದ ಪಕ್ಷ/ನಾಯಕರು ಹವಾಲಾ ಚಾನೆಲ್ ಮೂಲಕ ಪಡೆದ 100 ಕೋಟಿ ರೂ.ಗಳ ಕಿಕ್‌ಬ್ಯಾಕ್ ಕುರಿತು ಎಎಪಿ ನಾಯಕನನ್ನು ಇಡಿ ವಿಚಾರಣೆ ನಡೆಸಿತ್ತು.
ಹೈದರಾಬಾದ್ ಮೂಲದ ಉದ್ಯಮಿ ಅರುಣ್ ಪಿಳ್ಳೈ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ ಅವರ ಬಗ್ಗೆಯೂ ವಿಚಾರಣೆ ನಡೆಸಲಾಗಿದೆ.
ಫೆಬ್ರುವರಿ 26 ರಂದು ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿತು ಮತ್ತು ನಂತರ ರೌಸ್ ಅವೆನ್ಯೂ ಜಿಲ್ಲಾ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅವರ ಜಾಮೀನು ಅರ್ಜಿಯು ಮಾರ್ಚ್ 10ರಂದು ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


