ಛತ್ತೀಸ್‌ಗಢ: ನಕ್ಸಲರೊಂದಿಗೆ ಗುಂಡಿನ ಕಾಳಗ, ಇಬ್ಬರು ಕೋಬ್ರಾ ಕಮಾಂಡೋಗಳಿಗೆ ಗಾಯ
ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸಿಆರ್‌ಪಿಎಫ್‌ನ ಎಲೈಟ್ ಜಂಗಲ್ ವಾರ್‌ಫೇರ್ ಯುನಿಟ್ ಕೋಬ್ರಾದ ಇಬ್ಬರು ಕಮಾಂಡೋಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ...

ರಾಯ್‌ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಸಿಆರ್‌ಪಿಎಫ್‌ನ ಎಲೈಟ್ ಜಂಗಲ್ ವಾರ್‌ಫೇರ್ ಯುನಿಟ್ ಕೋಬ್ರಾದ ಇಬ್ಬರು ಕಮಾಂಡೋಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಕನಿಷ್ಠ ಅರ್ಧ ಡಜನ್ ನಕ್ಸಲರಿಗೆ ಗಾಯಗಳಾಗಿವೆ ಎಂದು ಅವರು ಹೇಳಿದ್ದಾರೆ.
"ಸಿಆರ್‌ಪಿಎಫ್‌ನ ವಿಶೇಷ ಕಾರ್ಯಪಡೆ(ಎಸ್‌ಟಿಎಫ್) ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್(ಕೋಬ್ರಾ) ಜಂಟಿ ತಂಡ, ಡಬ್ಬಮಾರ್ಕಾ ಶಿಬಿರದಿಂದ ಸಕ್ಲರ್ ಕಡೆಗೆ ಕಾರ್ಯಾಚರಣೆ ಆರಂಭಿಸಿದ ನಂತರ ಬಳಿಗ್ಗೆ 9 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಸುನೀಲ್ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ.
"ಕೋಬ್ರಾದ 202ನೇ ಮತ್ತು 208ನೇ ಬೆಟಾಲಿಯನ್‌ನ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಎನ್‌ಕೌಂಟರ್ ಸುಮಾರು 45 ನಿಮಿಷಗಳ ಕಾಲ ನಡೆಯಿತು ಮತ್ತು ಭದ್ರತಾ ಸಿಬ್ಬಂದಿಯನ್ನು ಕಂಡು ನಕ್ಸಲರು ದಟ್ಟ ಅರಣ್ಯಕ್ಕೆ ಪರಾರಿಯಾಗಿದ್ದಾರೆ" ಎಂದು ಅವರು ಹೇಳಿದ್ದಾರೆ.
ಎನ್‌ಕೌಂಟರ್ ನಂತರ ಸ್ಥಳದಿಂದ ಬಿಜಿಎಲ್(ಬ್ಯಾರೆಲ್ ಗ್ರೆನೇಡ್ ಲಾಂಚರ್) ಶೆಲ್‌ಗಳು ಸೇರಿದಂತೆ ದೊಡ್ಡ ಪ್ರಮಾಣದಲ್ಲಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
"ಕೋಬ್ರಾದ 202ನೇ ಬೆಟಾಲಿಯನ್‌ನ ಇನ್‌ಸ್ಪೆಕ್ಟರ್ ಮುನೇಶ್ ಕುಮಾರ್ ಮೀನಾ ಮತ್ತು ಕೋಬ್ರಾದ 208ನೇ ಬೆಟಾಲಿಯನ್‌ನ ಕಾನ್‌ಸ್ಟೆಬಲ್ ಅಮಿತ್ ಮೋದಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ" ಎಂದು ಎಸ್‌ಪಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


