ದೆಹಲಿಯಲ್ಲಿ ಕೆಸಿಆರ್ ಪುತ್ರಿ ಕವಿತಾ ಉಪವಾಸ ಸತ್ಯಾಗ್ರಹ, 12 ಪಕ್ಷಗಳ ಬೆಂಬಲ
ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವಂತೆ ಒತ್ತಾಯಿಸಿ ಭಾರತ್ ರಾಷ್ಟ್ರ ಸಮಿತಿ ಹಿರಿಯ ನಾಯಕಿ ಕೆ.ಕವಿತಾ ಇಂದು ನವದೆಹಲಿಯಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ನವದೆಹಲಿ: ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸುವಂತೆ ಒತ್ತಾಯಿಸಿ ಭಾರತ್ ರಾಷ್ಟ್ರ ಸಮಿತಿ ಹಿರಿಯ ನಾಯಕಿ ಕೆ.ಕವಿತಾ ಇಂದು ಜಂತರ್ ಮಂಥರ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮನ್ ಯೆಚೂರಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಈ ಸತ್ಯಾಗ್ರಹದಲ್ಲಿ ಪಾಲ್ಗೊಂಡರು. ಕವಿತಾ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವುದಾಗಿ 12 ಪಕ್ಷಗಳು ನಿನ್ನೆ ಖಚಿತಪಡಿಸಿದ್ದವು.
ಪ್ರತಿಭಟನೆ ವೇಳೆ ಮಾತನಾಡಿದ ಕವಿತಾ, 2014 ಮತ್ತು 2019ರ ಸಾರ್ವತ್ರಿಕ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತರುವುದಾಗಿ ಭರವಸೆ ನೀಡಿತ್ತು, ಆದರೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೂ ಮಾತನ್ನು ಉಳಿಸಿಕೊಂಡಿಲ್ಲ. "ಮಹಿಳಾ ಮೀಸಲಾತಿ ಮಸೂದೆಯು ಮಹತ್ವದ್ದಾಗಿದೆ ಮತ್ತು ನಾವು ಅದನ್ನು ಶೀಘ್ರದಲ್ಲೇ ತರಬೇಕಾಗಿದೆ. ಮಸೂದೆಯನ್ನು ಮಂಡಿಸುವವರೆಗೂ ಈ ಪ್ರತಿಭಟನೆಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದರು.
ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ 1/3ರಷ್ಟು ಸ್ಥಾನಗಳನ್ನು ಕಾಯ್ದಿರಿಸಲು ಸಂವಿಧಾನದ ತಿದ್ದುಪಡಿಗಾಗಿ ಈ ಮಸೂದೆ ಜಾರಿಗೆ ಒತ್ತಾಯಿಸಲಾಗುತ್ತಿದೆ. ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ವಿಚಾರಣೆ ಒಳಪಡಿಸುವ ಸಾಧ್ಯತೆಯಿರುವಂತೆಯೇ ಉಪವಾಸ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


