ಮುಂಬೈ ಫಿಲ್ಮ್ ಸಿಟಿಯ ಟಿವಿ ಧಾರಾವಾಹಿ ಸೆಟ್ ನಲ್ಲಿ ಭಾರೀ ಅಗ್ನಿ ಅವಘಡ
ಮುಂಬೈನ ಫಿಲ್ಮ್ ಸಿಟಿಯಲ್ಲಿ ಶುಕ್ರವಾರ ಟಿವಿ ಧಾರಾವಾಹಿ ಗಮ್ ಹೈ ಕಿಸಿಕೇ ಪ್ಯಾರ್ ಮೆಯಿನ್ ಸೆಟ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಮುಂಬೈನ ಫಿಲ್ಮ್ ಸಿಟಿಯಲ್ಲಿ ಶುಕ್ರವಾರ ಟಿವಿ ಧಾರಾವಾಹಿ ಗಮ್ ಹೈ ಕಿಸಿಕೇ ಪ್ಯಾರ್ ಮೆಯಿನ್ ಸೆಟ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಶನ್‌ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಧಾರಾವಾಹಿಯ ಚಿತ್ರೀಕರಣ ನಡೆಯುತ್ತಿದ್ದ ಸ್ಟುಡಿಯೊದ 2,000 ಚದರ ಅಡಿ ವಿಸ್ತೀರ್ಣದ ನೆಲ ಮಹಡಿಯಲ್ಲಿ ಇಂದು ಸಂಜೆ 4.30ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದೆ.
ಅಗ್ನಿ ಅವಘಡದಲ್ಲಿ ಯಾವುದೇ ಜೀವ ಹಾನಿ ಅಥವಾ ಗಾಯಗೊಂಡಿರುವ ಬಗ್ಗೆ ಇದುವರೆಗೂ ವರದಿಯಾಗಿಲ್ಲ ಎಂದು ಅಧಿಕಾರಿ ಹೇಳಿದ್ದಾರೆ.
ಕನಿಷ್ಠ 12 ಅಗ್ನಿಶಾಮಕ ಇಂಜಿನ್‌ಗಳು, ಒಂದು ನೀರಿನ ಟ್ಯಾಂಕರ್, ಮೂರು ಸ್ವಯಂಚಾಲಿತ ಟರ್ನ್-ಟೇಬಲ್‌ಗಳು(AWTT), ಒಂದು ತ್ವರಿತ ಪ್ರತಿಕ್ರಿಯೆ ವಾಹನ ಮತ್ತು ಇತರ ಅಗ್ನಿಶಾಮಕ ದಳದ ವಾಹನಗಳು ಸ್ಥಳದಲ್ಲಿದ್ದು, ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


