ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆ ಮಾರ್ಚ್ 21ಕ್ಕೆ ಮುಂದೂಡಿಕೆ
ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಬಂಧನಕ್ಕೊಳಗಾಗಿರುವ ಎಎಪಿ ಹಿರಿಯ ನಾಯಕ ಹಾಗೂ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಕೋರ್ಟ್ ಮಾರ್ಚ್ 21ಕ್ಕೆ ಮುಂದೂಡಿದೆ.

ನವದೆಹಲಿ: ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಬಂಧನಕ್ಕೊಳಗಾಗಿರುವ ಎಎಪಿ ಹಿರಿಯ ನಾಯಕ ಹಾಗೂ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಕೋರ್ಟ್ ಮಾರ್ಚ್ 21ಕ್ಕೆ ಮುಂದೂಡಿದೆ.
ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಸಿಸೋಡಿಯಾ ಅವರನ್ನು ಗುರುವಾರ ತನ್ನ ವಶಕ್ಕೆ ಪಡೆದಿರುವ ಜಾರಿ ನಿರ್ದೇಶನಾಲಯ(ಇಡಿ), ಇಂದು ನಗರದ ನ್ಯಾಯಾಲಯದ ಮುಂದೆ ಹಾಜರುಪಡಿಸಿ, ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು 10 ದಿನಗಳ ಕಾಲ ತನ್ನ ಕಸ್ಟಡಿಗೆ ನೀಡುವಂತೆ ಕೋರಿದೆ.
2021-22ರ ದೆಹಲಿ ಮದ್ಯ ಅಥವಾ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ ನಂತರ ಈಗ ಇಡಿ ವಶಕ್ಕೆ ಪಡೆದಿದೆ.
ಜಾರಿ ನಿರ್ದೇಶನಾಲಯ ಮಾರ್ಚ್ 7 ರಂದು ಸಿಸೋಡಿಯಾ ಅವರನ್ನು ಮೊದಲ ಸುತ್ತಿನ ವಿಚಾರಣೆಗೆ ಒಳಪಡಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


