ಕೊರೊನಾವೈರಸ್: ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ದಿಡೀರ್ ಏರಿಕೆ; 24 ಗಂಟೆಗಳಲ್ಲಿ ಒಬ್ಬರು ಸಾವು
ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 456 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,89,968ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,406ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಶನಿವಾರ ತಿಳಿಸಿದೆ.

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 456 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,89,968ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,406ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಶನಿವಾರ ತಿಳಿಸಿದೆ.
ಇದೇ ಅವಧಿಯಲ್ಲಿ ಗುಜರಾತ್‌ನಲ್ಲಿ ಒಂದು ಸಾವು ಸೇರಿದಂತೆ ಈವರೆಗೆ ಸಾವಿಗೀಡಾದವರ ಸಂಖ್ಯೆ 5,30,780ಕ್ಕೆ ಏರಿಕೆಯಾಗಿದೆ ಎಂದು ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿಯಿಂದ ತಿಳಿದುಬಂದಿದೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ರಷ್ಟಿದೆ. ಸದ್ಯ ಈವರೆಗೆ 4,41,55,782 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ: H3N2 ಇನ್ಫ್ಲುಯೆಂಜಾ: ಭಯ ಬೇಡ, ಜಾಗ್ರತೆ ಇರಲಿ
ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.64 ಕೋಟಿಗೂ ಅಧಿಕ ಕೋವಿವ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


