ದೇಶ

ರೈತ ನಾಯಕ ರಾಕೇಶ್ ಟಿಕಾಯತ್, ಕುಟುಂಬಕ್ಕೆ ಬೆದರಿಕೆ, ಆರೋಪಿ ಬಂಧನ

ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮತ್ತು ಅವರ ಕುಟುಂಬಕ್ಕೆ ಫೋನ್ ಮೂಲ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೈತ ನಾಯಕ ರಾಕೇಶ್ ಟಿಕಾಯತ್, ಕುಟುಂಬಕ್ಕೆ ಬೆದರಿಕೆ, ಆರೋಪಿ ಬಂಧನ
ರೈತ ನಾಯಕ ರಾಕೇಶ್ ಟಿಕಾಯತ್
Published On :

ನವ ದೆಹಲಿ: ಭಾರತೀಯ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಮತ್ತು ಅವರ ಕುಟುಂಬಕ್ಕೆ ಫೋನ್ ಮೂಲ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತನನ್ನು ದೇವಾ ಸಿಂಗ್ ಪುತ್ರ ವಿಶಾಲ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಭೋರಾ ಕಲಾನ್ ಠಾಣಾಧಿಕಾರಿ ಅಕ್ಷಯ್ ಶರ್ಮಾ ಸುದ್ದಿಗಾರರಿಗೆ ತಿಳಿಸಿದರು. ಆರೋಪಿ ದೆಹಲಿಯಿಂದ ಕರೆ ಮಾಡಿರುವುದು ಪತ್ತೆಯಾಗಿದ್ದು, ಅಲ್ಲಿಂದ  ಮುಜಾಫರ್‌ನಗರ ಪೊಲೀಸರು ಬಂಧಿಸಿದ್ದಾರೆ ಎಂದು ಎಸ್‌ಎಚ್‌ಒ ಹೇಳಿದರು.

ಅಪರಿಚಿತ ವ್ಯಕ್ತಿ ದೂರವಾಣಿ ಕರೆ ಮಾಡಿ, ರೈತ ಚಳವಳಿಗಳಿಂದ ದೂರ ಉಳಿಯದಿದ್ದರೆ ರಾಕೇಶ್ ಟಿಕಾಯತ್ ಮತ್ತು ಅವರ ಕುಟುಂಬ ಸದಸ್ಯರನ್ನು ಬಾಂಬ್ ದಾಳಿಗೆ ಗುರಿಪಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ರಾಕೇಶ್ ಟಿಕಾಯತ್ ಅವರ ಸಹೋದರ  ನರೇಶ್ ಟಿಕಾಯಿತ್ ಅವರ ಪುತ್ರ ಗೌರವ್ ಟಿಕಾಯಿತ್ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. 

ಬಂಧಿತ ವ್ಯಕ್ತಿ  ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 507 ಮತ್ತು 506 ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಆರಂಭಿಸಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.