ಬಿಹಾರ: ಗೋಮಾಂಸ ಸಾಗಾಟದ ಶಂಕೆ; ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಕೊಂದ ಮೂವರ ಬಂಧನ
ಬಿಹಾರದ ಸರನ್ ಜಿಲ್ಲೆಯಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಶಂಕೆಯ ಮೇಲೆ ಗುಂಪೊಂದು ಹೊಡೆದು ಕೊಂದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಸರನ್: ಬಿಹಾರದ ಸರನ್ ಜಿಲ್ಲೆಯಲ್ಲಿ 55 ವರ್ಷದ ವ್ಯಕ್ತಿಯೊಬ್ಬರು ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಶಂಕೆಯ ಮೇಲೆ ಗುಂಪೊಂದು ಹೊಡೆದು ಕೊಂದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಮೃತರನ್ನು ಸಿವಾನ್ ಜಿಲ್ಲೆಯ ಹಸನ್‌ಪುರ ಗ್ರಾಮದ ನಿವಾಸಿ ನಸೀಮ್ ಖುರೇಷಿ ಎಂದು ಗುರುತಿಸಲಾಗಿದೆ.
ಸ್ಥಳೀಯ ಪೊಲೀಸ್ ಅಧಿಕಾರಿಯ ಪ್ರಕಾರ, ಮಂಗಳವಾರ ನಸೀಮ್ ಮತ್ತು ಅವರ ಸೋದರಳಿಯ ಫಿರೋಜ್ ಖುರೇಷಿ ಸರನ್ ಜಿಲ್ಲೆಯ ಜೋಗಿಯಾ ಗ್ರಾಮದಲ್ಲಿ ತಮ್ಮ ಸಂಬಂಧಿಕರನ್ನು ಭೇಟಿಯಾಗಲು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.
"ಇಬ್ಬರನ್ನೂ ಮಸೀದಿಯ ಬಳಿ ಸ್ಥಳೀಯರು ತಡೆದರು" ಮತ್ತು ಅದರ ನಂತರ ತೀವ್ರ ವಾಗ್ವಾದ ನಡೆಯಿತು. ಫಿರೋಜ್ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆದರೆ ಗುಂಪು ನಜೀಮ್ ಅವರನ್ನು ದೊಣ್ಣೆಗಳಿಂದ ಥಳಿಸಿದ್ದಾರೆ.
"ನಂತರ, ಜನ ಸ್ವತಃ ನಸೀಮ್‌ನನ್ನು ರಸೂಲ್‌ಪುರ ಗ್ರಾಮದಲ್ಲಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ನಸೀಮ್ ನನ್ನು ಪೊಲೀಸರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ" ಎಂದು ಸರನ್ ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಗೌರವ್ ಮಂಗಳಾ ಅವರು ತಿಳಿಸಿದ್ದಾರೆ.
"ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಶಂಕಿತರನ್ನು ಬಂಧಿಸಲು ಪೊಲೀಸರು ಶೋಧ ನಡೆಸಿದ್ದಾರೆ. ಪ್ರಕರಣವನ್ನು ಎಲ್ಲಾ ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ" ಎಂದು ಎಸ್ ಪಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


