ರಾಜ್ಯಸಭೆ ಕಾಂಗ್ರೆಸ್ ಉಪ ನಾಯಕರಾಗಿ ಪ್ರಮೋದ್ ತಿವಾರಿ, ಸಚೇತಕರಾಗಿ ರಜನಿ ನೇಮಕ
ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕರಾಗಿ ಪ್ರಮೋದ್ ತಿವಾರಿ ಮತ್ತು ಪಕ್ಷದ ಸಚೇತಕರಾಗಿ ರಜನಿ ಪಾಟೀಲ್ ಅವರನ್ನು ಕಾಂಗ್ರೆಸ್ ಶನಿವಾರ ನೇಮಕ ಮಾಡಿದೆ.

ನವದೆಹಲಿ: ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕರಾಗಿ ಪ್ರಮೋದ್ ತಿವಾರಿ ಮತ್ತು ಪಕ್ಷದ ಸಚೇತಕರಾಗಿ ರಜನಿ ಪಾಟೀಲ್ ಅವರನ್ನು ಕಾಂಗ್ರೆಸ್ ಶನಿವಾರ ನೇಮಕ ಮಾಡಿದೆ.
ಆನಂದ್ ಶರ್ಮಾ ಅವರ ನಿವೃತ್ತಿ ಮತ್ತು ರಾಜೀವ್ ಸತವ್ ಅವರ ನಿಧನದ ನಂತರ ಖಾಲಿಯಾದ ಸ್ಥಾನಗಳಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಇಬ್ಬರು ನಾಯಕರನ್ನು ನೇಮಕ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನು ಓದಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಹಠಾತ್ ನಿಧನ: ಸಿಎಂ ಸೇರಿ ರಾಜಕೀಯ ನಾಯಕರ ಸಂತಾಪ, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಈ ನೇಮಕಾತಿಯ ಕುರಿತು ರಾಜ್ಯಸಭಾ ಅಧ್ಯಕ್ಷರಿಗೆ ಪತ್ರ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿರುವ ತಿವಾರಿ ಅವರು ಈ ಹಿಂದೆ ಉತ್ತರ ಪ್ರದೇಶ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸಂಸದರಾಗಿದ್ದಾರೆ.
ರಜನಿ ಪಾಟೀಲ್ ಅವರು ಮಹಾರಾಷ್ಟ್ರದಿಂದ ರಾಜ್ಯಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದು, ಪ್ರಸ್ತುತ ಅಶಿಸ್ತಿನ ವರ್ತನೆಗಾಗಿ ಬಜೆಟ್ ಅಧಿವೇಶನದಿಂದ ಅಮಾನತುಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


