ಜೈಲಿಗೆ ಹಾಕಿ ತೊಂದರೆ ಕೊಡಬಹುದು ಆದರೆ, ನನ್ನ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ: ಮನೀಶ್ ಸಿಸೋಡಿಯಾ
ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಿಂದ ಸಂದೇಶವನ್ನು ಕಳುಹಿಸಿದ್ದಾರೆ. ಜೈಲುವಾಸವು ಅವರಿಗೆ ತೊಂದರೆಗಳನ್ನು ಉಂಟುಮಾಡಬಹುದು. ಆದರೆ, ಅದು ಅವರ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ತಿಹಾರ್ ಜೈಲಿನಿಂದ ಸಂದೇಶವನ್ನು ಕಳುಹಿಸಿದ್ದಾರೆ. ಜೈಲುವಾಸವು ಅವರಿಗೆ ತೊಂದರೆಗಳನ್ನು ಉಂಟುಮಾಡಬಹುದು. ಆದರೆ, ಅದು ಅವರ ಉತ್ಸಾಹವನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
2021-22ರ ದೆಹಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕನನ್ನು ಫೆಬ್ರುವರಿ 26 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿದೆ.
ಈ ವಾರದ ಆರಂಭದಲ್ಲಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.
'ಸಾಹೇಬ್, ನೀವು ನನ್ನನ್ನು ಜೈಲಿಗೆ ಹಾಕುವ ಮೂಲಕ ನನಗೆ ತೊಂದರೆ ನೀಡಬಹುದು, ಆದರೆ ನೀವು ನನ್ನ ಉತ್ಸಾಹವನ್ನು ಮುರಿಯಲು ಸಾಧ್ಯವಿಲ್ಲ. ಬ್ರಿಟಿಷ್ ಆಡಳಿತಗಾರರು ಸಹ ಸ್ವಾತಂತ್ರ್ಯ ಹೋರಾಟಗಾರರಿಗೆ ತೊಂದರೆ ಉಂಟುಮಾಡಿದರು, ಆದರೆ, ಅವರ ಉತ್ಸಾಹವು ಎಂದಿಗೂ ಕುಗ್ಗಲಿಲ್ಲ- ಜೈಲಿನಿಂದ ಮನೀಶ್ ಸಿಸೋಡಿಯಾ ಅವರ ಸಂದೇಶ' ಎಂದು ಎಎಪಿ ನಾಯಕನ ಅಧಿಕೃತ ಟ್ವಿಟರ್ ಹ್ಯಾಂಡಲ್ನಿಂದ ಹಿಂದಿಯಲ್ಲಿ ಟ್ವೀಟ್ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


