ಅರವಿಂದ್ ಕೇಜ್ರಿವಾಲ್, ಭಗವಂತ್ ಮಾನ್ ನೇತೃತ್ವದಲ್ಲಿ ಜೈಪುರದಲ್ಲಿ 'ತಿರಂಗ ಯಾತ್ರೆ'
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದಲ್ಲಿ ಸೋಮವಾರ ಜೈಪುರದಲ್ಲಿ ಎಎಪಿಯ 'ತಿರಂಗ ಯಾತ್ರೆ' ನಡೆಯಲಿದೆ ಎಂದು ಆಪ್ ನಾಯಕ ವಿನಯ್ ಮಿಶ್ರಾ...

ಜೈಪುರ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದಲ್ಲಿ ಸೋಮವಾರ ಜೈಪುರದಲ್ಲಿ ಎಎಪಿಯ 'ತಿರಂಗ ಯಾತ್ರೆ' ನಡೆಯಲಿದೆ ಎಂದು ಆಪ್ ನಾಯಕ ವಿನಯ್ ಮಿಶ್ರಾ ಅವರು ಭಾನುವಾರ ಹೇಳಿದ್ದಾರೆ.
ಇಂದು ಜೈಪುರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಿಶ್ರಾ, ತಮ್ಮ ಪಕ್ಷದ ದೆಹಲಿ ಮತ್ತು ಪಂಜಾಬ್ ಮುಖ್ಯಮಂತ್ರಿಗಳು ಈ ಯಾತ್ರೆಯೊಂದಿಗೆ ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಜನ ಹೆಚ್ಚಿನ ಸಂಖ್ಯೆಯಲ್ಲಿ ಈ ಯಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಜೈಪುರದ ಸಂಗನೇರಿ ಗೇಟ್‌ನಿಂದ ಅಜ್ಮೇರಿ ಗೇಟ್‌ವರೆಗೆ 'ತಿರಂಗ ಯಾತ್ರೆ'(ತ್ರಿವರ್ಣ ರ್ಯಾಲಿ) ನಡೆಯಲಿದ್ದು, ನಂತರ ದೆಹಲಿ ಸಿಎಂ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಮಾನ್ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ವರ್ಷಾಂತ್ಯದಲ್ಲಿ ರಾಜಸ್ಥಾನದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ರಾಜಸ್ಥಾನದಲ್ಲಿ ಪಕ್ಷದ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ಕಳೆದ 15-20 ದಿನಗಳಲ್ಲಿ ಸುಮಾರು ನಾಲ್ಕೂವರೆ ಲಕ್ಷ ಮಂದಿ ಪಕ್ಷದ ಸದಸ್ಯತ್ವ ಪಡೆದಿದ್ದಾರೆ ಎಂದು ಮಿಶ್ರಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


