'ನನ್ನ ಮಗನಿಗೆ 18 ವರ್ಷ ತುಂಬಿದೆ': ಗರ್ಲ್ಫ್ರೆಂಡ್ ಜತೆ ಪುತ್ರನ ಫೋಟೋಗೆ ಉದಯನಿಧಿ ಸ್ಟಾಲಿನ್ ಪ್ರತಿಕ್ರಿಯೆ
ತಮಿಳುನಾಡು ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಉದಯನಿಧಿ ಸ್ಟಾಲಿನ್ ಅವರ ಪುತ್ರ ಇನ್ಬನಿತಿ ಅವರು ಗರ್ಲ್ಫ್ರೆಂಡ್ ಜತೆ ಇರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಉದಯನಿಧಿ...

ಚೆನ್ನೈ: ತಮಿಳುನಾಡು ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ಉದಯನಿಧಿ ಸ್ಟಾಲಿನ್ ಅವರ ಪುತ್ರ ಇನ್ಬನಿತಿ ಅವರು ಗರ್ಲ್ಫ್ರೆಂಡ್ ಜತೆ ಇರುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಉದಯನಿಧಿ ಸ್ಟಾಲಿನ್ ಅವರು, ತಮ್ಮ ಮಗನಿಗೆ 18 ವರ್ಷ ತುಂಬಿದೆ ಮತ್ತು ಅದು ಅವರ ವೈಯಕ್ತಿಕ ವಿಚಾರ ಎಂದು ಹೇಳಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರ ಪುತ್ರರಾಗಿರುವ ಉದಯನಿಧಿ ಸ್ಟಾಲಿನ್ ಅವರು, ಒಬ್ಬ ಪ್ರಬುದ್ಧ ವ್ಯಕ್ತಿಯ ವೈಯಕ್ತಿಕ ವಿಚಾರಗಳಲ್ಲಿ ಮಧ್ಯಪ್ರವೇಶಿಸಲು ಕೆಲವು ನಿರ್ಬಂಧಗಳಿವೆ ಎಂದು ಭಾನುವಾರ ಹೇಳಿದ್ದಾರೆ.
ನನ್ನ ಪತ್ನಿ ಮತ್ತು ಮಗನ ಜೊತೆ ನಾನು ಏನು ಚರ್ಚೆ ಮಾಡಿದ್ದೇನೆ ಎಂಬುದನ್ನು ನಿಮಗೆ ಬಹಿರಂಗಪಡಿಸಲು ಸಾಧ್ಯವಿಲ್ಲ. ಅದು ನನ್ನ ವೈಯಕ್ತಿಕ ವಿಚಾರ ಎಂದು ಉದಯನಿಧಿ ಸ್ಟಾಲಿನ್ ತಿಳಿಸಿದ್ದಾರೆ.
ಜನವರಿಯಲ್ಲಿ ಇನ್ಬನಿತಿ ಮತ್ತು ಅವರ ಗೆಳತಿಯ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದವು. ಆದರೆ ಉದಯನಿಧಿ ಅವರು ಇದಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಅವರ ಪತ್ನಿ ಕೃತಿಕಾ ಉದಯನಿಧಿ ಟ್ವೀಟ್ ಮಾಡಿ, ಪ್ರೀತಿಸಲು ಮತ್ತು ಪ್ರೀತಿ ವ್ಯಕ್ತಪಡಿಸಲು ಯಾವುದೇ ನಿರ್ಬಂಧವಿಲ್ಲ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


