ಒಡಿಶಾ: ಜನವರಿ, ಫೆಬ್ರವರಿ ತಿಂಗಳಲ್ಲಿ 59 ಹೆಚ್3ಎನ್2 ಇನ್ಫ್ಲುಯೆನ್ಸ ಪ್ರಕರಣಗಳು ಪತ್ತೆ
ಒಡಿಶಾದಲ್ಲಿ ಜನವರಿ, ಫೆಬ್ರವರಿ ತಿಂಗಳಲ್ಲಿ ಒಟ್ಟು 59 ಹೆಚ್3 ಎನ್ 2 ಇನ್ಫ್ಲುಯೆನ್ಸ ಪ್ರಕರಣಗಳು ವರದಿಯಾಗಿದೆ.

ಭುವನೇಶ್ವರ್: ಒಡಿಶಾದಲ್ಲಿ ಜನವರಿ, ಫೆಬ್ರವರಿ ತಿಂಗಳಲ್ಲಿ ಒಟ್ಟು 59 ಹೆಚ್3 ಎನ್ 2 ಇನ್ಫ್ಲುಯೆನ್ಸ ಪ್ರಕರಣಗಳು ವರದಿಯಾಗಿದೆ
225 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು, ಈ ಪೈಕಿ 59 ಪ್ರಕರಣಗಳು ದೃಢಪಟ್ಟಿದೆ.
ಭುವನೇಶ್ವರದ ಪ್ರಾದೇಶಿಕ ವೈದ್ಯಕೀಯ ಸಂಶೋಧನೆ ಕೇಂದ್ರದ ನಿರ್ದೇಶಕ ಡಾ. ಸಂಗಮಿತ್ರ ಪಾಟಿ ಈ ಮಾಹಿತಿಯನ್ನು ದೃಢಪಡಿಸಿದ್ದು, ಹೆಚ್3ಎನ್2 ಲಕ್ಷಣಗಳು ಜ್ವರ ಹಾಗೂ ಕೆಮ್ಮು ಸೇರಿದಂತೆ ಋತುಮಾನದ ಜ್ವರ ವೈರಸ್ಗಳ ಲಕ್ಷಣಗಳನ್ನೇ ಹೋಲುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಹೆಚ್3ಎನ್2 ವೈರಾಣುಗಳ ಪ್ರಕರಣದ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರದಂದು ಒಡಿಶಾ ಆರೋಗ್ಯ ಕಾರ್ಯದರ್ಶಿ ಇನ್ಫ್ಲುಯೆನ್ಸ ತರಹದ ಅನಾರೋಗ್ಯ ಮತ್ತು ತೀವ್ರ ಉಸಿರಾಟದ ಸೋಂಕುಗಳ ಬಗ್ಗೆ ಆರೋಗ್ಯ ಸೌಲಭ್ಯ ಮಟ್ಟದಲ್ಲಿ ಮತ್ತು ಸಮುದಾಯ ಮಟ್ಟದಲ್ಲಿ ನಿಗಾ ವಹಿಸುವಂತೆ ಸೂಚಿಸಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


