ಐಐಟಿ ಮದ್ರಾಸ್ ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ, ಒಂದೇ ತಿಂಗಳಲ್ಲಿ ಇಬ್ಬರು ಸಾವಿಗೆ ಶರಣು
ಐಐಟಿ-ಮದ್ರಾಸ್‌ನ ಮೂರನೇ ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ರೂಮ್ ನಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಚೆನ್ನೈ: ಐಐಟಿ-ಮದ್ರಾಸ್‌ನ ಮೂರನೇ ವರ್ಷದ ಬಿಟೆಕ್ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ರೂಮ್ ನಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನೆರೆಯ ಆಂಧ್ರಪ್ರದೇಶ ಮೂಲದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ 20 ವರ್ಷದ ವಿದ್ಯಾರ್ಥಿ, ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಪ್ರಾಥಮಿಕ ತನಿಖೆಯ ಪ್ರಕಾರ, ಮೃತ ವಿದ್ಯಾರ್ಥಿ ಅಧ್ಯಯನದ ಮೇಲೆ ಕೇಂದ್ರೀಕರಿಸಲು ಮತ್ತು ಶೈಕ್ಷಣಿಕ ಕಾರ್ಯಗಳನ್ನು ಪೂರ್ಣಗೊಳಿಸಲು ವಿಫಲವಾಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತನಿಖೆ ಮತ್ತು ಶವಪರೀಕ್ಷೆ ಪೂರ್ಣಗೊಂಡ ನಂತರವೇ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.
ಫೆಬ್ರವರಿ 14 ರಂದು ಐಐಟಿ ಮದ್ರಾಸ್‌ನಲ್ಲಿ ಇಂಜಿನಿಯರಿಂಗ್ ಸ್ನಾತಕೋತ್ತರ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಒಂದು ತಿಂಗಳಲ್ಲೇ ಈ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


