2022ರಲ್ಲಿ ಐಐಟಿ, ಎನ್‌ಐಟಿ ಮತ್ತು ಐಐಎಂಗಳಲ್ಲಿ 16 ವಿದ್ಯಾರ್ಥಿಗಳು ಆತ್ಮಹತ್ಯೆ
2022ರಲ್ಲಿ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಐಐಟಿಯ ಎಂಟು ವಿದ್ಯಾರ್ಥಿಗಳು ಸೇರಿದಂತೆ ಎನ್ಐಟಿ ಮತ್ತು ಐಐಎಂಗಳಲ್ಲಿ ಒಟ್ಟು 16 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನವದೆಹಲಿ: 2022ರಲ್ಲಿ ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಐಐಟಿಯ ಎಂಟು ವಿದ್ಯಾರ್ಥಿಗಳು ಸೇರಿದಂತೆ ಎನ್ಐಟಿ ಮತ್ತು ಐಐಎಂಗಳಲ್ಲಿ ಒಟ್ಟು 16 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾವಿಗೆ ಶೈಕ್ಷಣಿಕ ಒತ್ತಡ, ಕೌಟುಂಬಿಕ ಮತ್ತು ವೈಯಕ್ತಿಕ ಕಾರಣಗಳು, ಮಾನಸಿಕ ಆರೋಗ್ಯ ಸಮಸ್ಯೆಗಳು ಕಾರಣ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ತಿಳಿಸಿದೆ.
2023 ರಲ್ಲಿ, ಆರು ಪ್ರಕರಣಗಳು ವರದಿಯಾಗಿವೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮತ್ತು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎನ್‌ಐಟಿ) ಯಿಂದ ತಲಾ ಮೂರು ಪ್ರಕರಣಗಳು ವರದಿಯಾಗಿವೆ.
2019 ರಲ್ಲೂ ಒಟ್ಟು 16 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಐಐಟಿ ಮತ್ತು ಎನ್‌ಐಟಿಗಳಿಂದ ತಲಾ ಎಂಟು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದರು.
2021 ರಲ್ಲಿ, ನಾಲ್ವರು ಐಐಟಿಗ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ಏಳು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2020 ರಲ್ಲಿ ಐಐಟಿಯ ಮೂವರು ವಿದ್ಯಾರ್ಥಿಗಳು - ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಡಾ ಸುಭಾಸ್ ಸರ್ಕಾರ್ ಅವರು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


