ಚರ್ಚ್ ಆಫ್ ನಾರ್ತ್ ಇಂಡಿಯಾದ ನಾಗ್ಪುರ ಸೇರಿದಂತೆ 11 ಕಚೇರಿ ಮೇಲೆ ಇಡಿ ದಾಳಿ!
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚರ್ಚ್ ಆಫ್ ನಾಗ್ಪುರ ಸೇರಿದಂತೆ ಅದರ 11 ಕಚೇರಿ (ಸಿಎನ್ಐ) ಮೇಲೆ ದಾಳಿ ನಡೆಸಿದ್ದಾರೆ.

ನಾಗ್ಪುರ: ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಚರ್ಚ್ ಆಫ್ ನಾಗ್ಪುರ ಸೇರಿದಂತೆ ಅದರ 11 ಕಚೇರಿ (ಸಿಎನ್ಐ) ಮೇಲೆ ದಾಳಿ ನಡೆಸಿದ್ದಾರೆ. ಭೋಪಾಲ್ ನಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳಿಂದ ಈ ಕಾರ್ಯಾಚರಣೆ ನಡೆದಿದೆ.
ಜಬಲ್ಪುರ ಪ್ರಾಂತ್ಯದ ಸಿಎನ್ಐ ನ ಬಿಷಪ್ ಪಿಸಿ ಸಿಂಗ್ ವಿರುದ್ಧ ವಂಚನೆಯ ಪ್ರಕರಣದ ಭಾಗವಾಗಿ ಈ ದಾಳಿಯಾಗಿದ್ದು, ಸದರ್ ಪ್ರದೇಶದ ಪ್ರೊಟೆಸ್ಟಂಟ್ ಪಂಗಡದ ಸಿಎನ್ಐ ಕಚೇರಿಯಲ್ಲಿ ಅಧಿಕಾರಿಗಳು ಶೋಧಕಾರ್ಯಾಚರಣೆ ಕೈಗೊಂಡಿದ್ದಾರೆ. ಸಿಂಗ್ ಅವರನ್ನು ಸೆಪ್ಟೆಂಬರ್ 2022 ರಲ್ಲಿ ಬಂಧನಕ್ಕೊಳಪಡಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಸಿ ಸಿಂಗ್ ಅವರ ನಿವಾಸದಿಂದ 1.6 ಕೋಟಿ ರೂಪಾಯಿ ಮೌಲ್ಯದ ಭಾರತೀಯ ಹಾಗೂ ವಿದೇಶಿ ಕರೆಸಿಯನ್ನು ವಶಕ್ಕೆ ಪಡೆಯಲಾಗಿತ್ತು. ಆಗ ಅವರು ಜರ್ಮನಿಯಲ್ಲಿದ್ದರು. ಪಿಸಿ ಸಿಂಗ್ ಅಧ್ಯಕ್ಷರಾಗಿರುವ ಶೈಕ್ಷಣಿಕ ಸೊಸೈಟಿಯಲ್ಲಿ ಹಣಕಾಸಿನ ಅವ್ಯವಹಾರ ನಡೆದಿದೆ ಎಂಬ ಆರೋಪದಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿದ್ಯಾರ್ಥಿಗಳಿಂದ 2004-05, 2011-12 ರ ಅವಧಿಯಲ್ಲಿ ಸಂಗ್ರಹಿಸಲಾದ ಶುಲ್ಕವನ್ನು ಧಾರ್ಮಿಕ ಸಂಸ್ಥೆಗಳಿಗೆ ವರ್ಗಾವಣೆ ಮಾಡಿ ಅದನ್ನು ಬಿಷಪ್ ನ ವೈಯಕ್ತಿಕ ಅಗತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ರೀತಿಯಾಗಿ ಅಕ್ರಮವಾಗಿ ವರ್ಗಾವಣೆಯಾದ ಹಣ ಸಿಎನ್ಐ ನ ನಾಗ್ಪುರ ಕಚೇರಿಗೂ ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


