ಎಚ್3ಎನ್2 ವೈರಸ್ ಸೋಂಕು ಭೀತಿ: ಮಾರ್ಚ್ 16 ರಿಂದ 26ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೇರಿ ಸರ್ಕಾರ
ಜ್ವರ, ಶೀತ ಮತ್ತು ಮೈಕೈ ನೋವುಗಳಂತಹ ರೋಗಲಕ್ಷಣಗಳನ್ನು ಹೊಂದಿರುವ ಎಚ್3ಎನ್2 ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಪುದುಚೇರಿ ಸರ್ಕಾರವು ಮಾರ್ಚ್ 16 ರಿಂದ ಮಾರ್ಚ್ 26 ರವರೆಗೆ 8ನೇ ತರಗತಿಯವರೆಗಿನ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದೆ.

ಪುದುಚೇರಿ: ಜ್ವರ, ಶೀತ ಮತ್ತು ಮೈಕೈ ನೋವುಗಳಂತಹ ರೋಗಲಕ್ಷಣಗಳನ್ನು ಹೊಂದಿರುವ ಎಚ್3ಎನ್2 ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಲ್ಲಿ ಪುದುಚೇರಿ ಸರ್ಕಾರವು ಮಾರ್ಚ್ 16 ರಿಂದ ಮಾರ್ಚ್ 26 ರವರೆಗೆ 8ನೇ ತರಗತಿಯವರೆಗಿನ ಎಲ್ಲಾ ಶಾಲೆಗಳಿಗೆ ಬುಧವಾರ ರಜೆ ಘೋಷಿಸಿದೆ.
ಕೇಂದ್ರಾಡಳಿತ ಪ್ರದೇಶದ ಪುದುಚೇರಿ, ಕಾರೈಕಲ್, ಮಾಹೆ ಮತ್ತು ಯಾನಂನ ಎಲ್ಲಾ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ವಿಶೇಷವಾಗಿ ಮಕ್ಕಳಲ್ಲಿ ವೈರಸ್ ಹರಡುವಿಕೆಯ ದೃಷ್ಟಿಯಿಂದ ಈ ಆದೇಶವು ಜಾರಿಯಲ್ಲಿರುತ್ತದೆ.
ಶೂನ್ಯವೇಳೆಯಲ್ಲಿ ವಿಧಾನಸಭೆಯಲ್ಲಿ ಮಾತನಾಡಿದ ಗೃಹ ಮತ್ತು ಶಿಕ್ಷಣ ಸಚಿವ ಎ. ನಮ್ಮಶಿವಾಯಂ, 'ವಿಶೇಷವಾಗಿ ಮಕ್ಕಳಲ್ಲಿ ಜ್ವರ ಹರಡುವ ಹಿನ್ನೆಲೆಯಲ್ಲಿ, ಖಾಸಗಿ-ನಿರ್ವಹಣೆಯ ಸಂಸ್ಥೆಗಳು ಮತ್ತು ಸರ್ಕಾರಿ ಅನುದಾನಿತ ಶಾಲೆಗಳು ಸೇರಿದಂತೆ ಪ್ರಾಥಮಿಕ ತರಗತಿಯಿಂದ 8ನೇ ತರಗತಿವರೆಗಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲು ಸರ್ಕಾರ ನಿರ್ಧರಿಸಿದೆ' ಎಂದರು.
ಮಾರ್ಚ್ 11 ರಂದು ಕೇಂದ್ರಾಡಳಿತ ಪ್ರದೇಶದ ಆರೋಗ್ಯ ಇಲಾಖೆಯು ಪುದುಚೇರಿಯಲ್ಲಿ ಮಾರ್ಚ್ 4 ರವರೆಗೆ ವೈರಲ್ ಎಚ್3ಎನ್2 ಉಪ ಪ್ರಕಾರಕ್ಕೆ ಸೇರಿದ 79 ವೈರಸ್ ಪ್ರಕರಣಗಳು ವರದಿಯಾಗಿವೆ ಎಂದು ಹೇಳಿಕೆ ನೀಡಿತ್ತು.
ಅಮೆರಿಕ ರೋಗ ನಿಯಂತ್ರಣ ಮತ್ತು ತಡೆಗಟ್ಟುವಿಕೆ ಕೇಂದ್ರಗಳ ಸಂಸ್ಥೆ (ಸಿಡಿಸಿ) ಪ್ರಕಾರ, ಎಚ್ 3 ಎನ್ 2 ಸಾಮಾನ್ಯವಾಗಿ ಹಂದಿಗಳಲ್ಲಿ ಹರಡುತ್ತದೆ ಮತ್ತು ಮನುಷ್ಯರಿಗೆ ಸೋಂಕು ತಗುಲುತ್ತದೆ. ಕೆಮ್ಮು, ಜ್ವರ, ನೋವು, ವಾಕರಿಕೆ, ವಾಂತಿ ಅಥವಾ ಅತಿಸಾರ ರೋಗಲಕ್ಷಣಗಳಿವೆ. ಇದು ಋತುಮಾನಕ್ಕೆ ಅನುಗುಣವಾಗಿ ಕಾಣಿಸಿಕೊಳ್ಳುವ ಇನ್‌ಫ್ಲುಯೆಂಜಾ ಸೋಂಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


