ಜೈಪುರ: ಹಾಸ್ಯನಟ ಖಯಾಲಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ಜೈಪುರದ ಹೋಟೆಲ್ ಕೊಠಡಿಯಲ್ಲಿ 25 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಖ್ಯಾತ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಖಯಾಲಿ ಸಹರಾನ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ...

ಜೈಪುರ: ಜೈಪುರದ ಹೋಟೆಲ್ ಕೊಠಡಿಯಲ್ಲಿ 25 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಖ್ಯಾತ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಖಯಾಲಿ ಸಹರಾನ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಮಂಗಳವಾರ ಜೈಪುರದ ಮಾನಸ ಸರೋವರ ಪೊಲೀಸ್ ಠಾಣೆಯಲ್ಲಿ ಹಾಸ್ಯನಟನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪೊಲೀಸರ ಪ್ರಕಾರ, ಸೋಮವಾರ ಈ ಘಟನೆ ನಡೆದಿದ್ದು, ಎಎಪಿ ಕಾರ್ಯಕರ್ತನಾಗಿರುವ ಹಾಸ್ಯನಟ, 'ಮದ್ಯದ ಅಮಲಿನಲ್ಲಿ' ಮಹಿಳೆಗೆ ಉದ್ಯೋಗ ಪಡೆಯಲು ಸಹಾಯ ಮಾಡುವ ನೆಪದಲ್ಲಿ ಮಾನಸ ಸರೋವರ ಪ್ರದೇಶದ ಹೋಟೆಲ್ ಕೊಠಡಿಯಲ್ಲಿ ಅತ್ಯಾಚಾರವೆಸಗಿದ್ದಾರೆ.
"ಮಹಿಳೆ ನೀಡಿದ ದೂರಿನ ಮೇರೆಗೆ ಹಾಸ್ಯನಟನ ವಿರುದ್ಧ ಐಪಿಸಿ ಸೆಕ್ಷನ್ 376(ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ" ಎಂದು ಮಾನಸ ಸರೋವರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಸಂದೀಪ್ ಯಾದವ್ ಅವರು ತಿಳಿಸಿದ್ದಾರೆ.
ಶ್ರೀಗಂಗಾನಗರ ಮೂಲದ ಮಹಿಳೆ ಸಂಸ್ಥೆಯೊಂದರಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಮಹಿಳೆ, ಮತ್ತೊಬ್ಬ ಮಹಿಳೆಯೊಂದಿಗೆ ಸುಮಾರು ಒಂದು ತಿಂಗಳ ಹಿಂದೆ ಉದ್ಯೋಗಕ್ಕಾಗಿ ಸಹಾಯ ಕೋರಿ ಹಾಸ್ಯನಟನನ್ನು ಸಂಪರ್ಕಿಸಿದ್ದರು ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


